More

    ಡಾರ್ಲಿಂಗ್ ಕೃಷ್ಣ ಸ್ಫೋಟಕ ಬ್ಯಾಟಿಂಗ್; ಸತತ ಎರಡನೇ ಜಯ ದಾಖಲಿಸಿದ ಕರ್ನಾಟಕ ಬುಲ್ಡೋಜರ್ಸ್​​

    ಹೈದರಾಬಾದ್: ಇಲ್ಲಿನ ರಾಜೀವ್​ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಪ್ರೀಮಿಯರ್​ ಲೀಗ್​ನ 8ನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್​ ತಂಡವು ಬೆಂಗಾಲ್ ಟೈಗರ್ಸ್​ಅನ್ನು ಮಣಿಸುವ ಮೂಲಕ ಗೆಲುವಿನ ನಗೆ ಬೀರಿದೆ.

    ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಬುಲ್ಡೋಜರ್ಸ್​ ಡಾರ್ಲಿಂಗ್​ ಕೃಷ್ಣ (72 ರನ್, 33 ಎಸೆತ) ಅರ್ಧಶತಕದ ನೆರವಿನೊಂದಿಗೆ ಮೊದಲ ಇನ್ನಿಂಗ್ಸ್​ನ 10 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 117ರನ್​ ಗಳಿಸಿತ್ತು. ಮೊದಲ ಇನ್ನಿಂಗ್ಸ್​ನಲ್ಲಿ 118 ರನ್​ಗಳ ಗುರಿ ಬೆನ್ನಟ್ಟಿದ ಬೆಂಗಾಲ್ ಟೈಗರ್ಸ್​ ತಂಡ ಮೊದಲ 10 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 109 ರನ್ ಪೇರಿಸಿತು. 

    ಇದನ್ನೂ ಓದಿ: ಪಾಕ್​ ಪರ ಘೋಷಣೆ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​; FSL ವರದಿಯಲ್ಲಿ ಸತ್ಯ ಬಹಿರಂಗ

    8 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ಪರ ಮತ್ತೊಮ್ಮೆ ಡಾರ್ಲಿಂಗ್ ಕೃಷ್ಣ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದರು. ಕೇವಲ 17 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದ ಡಾರ್ಲಿಂಗ್​ ಕೃಷ್ಣ 21 ಎಸೆತಗಳಲ್ಲಿ 54 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ಇವರಿಗೆ ಉತ್ತಮ ಸಾಥ್​ ನೀಡಿದ ಕರಣ್​ (49 ರನ್, 23 ಎಸೆತ) ಎರಡನೇ ಇನ್ನಿಂಗ್ಸ್​ನಲ್ಲಿ ಕರ್ನಾಟಕದ ಮೊತ್ತವನ್ನು 5 ವಿಕೆಟ್​ ನಷ್ಟಕ್ಕೆ 130 ಎನ್​ ಕಲೆಹಾಕುವಲ್ಲಿ ಯಶಸ್ವಿಯಾದರು.

    ಎರಡನೇ ಇನ್ನಿಂಗ್ಸ್​ನಲ್ಲಿ 139 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಬೆಂಗಾಲ್ ತಂಡಕ್ಕೆ ಇನ್ನಿಲ್ಲದಂತೆ ಕಾಡಿದ ಕರ್ನಾಟಕ ಬೌಲರ್​ಗಳು ಎದುರಾಳಿ ತಂಡವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು ಅಂತಿಮವಾಗಿ ತಂಡಕ್ಕೆ 30 ರನ್​ಗಳ ಜಯ ತಂದುಕೊಡುವಲ್ಲಿ ಯಶಸ್ವಿಯಾದರು. ಈ ಮೂಲಕ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್​ ಸತತ ಎರಡನೇ ಜಯವನ್ನು ದಾಖಲಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts