More

    ಕಾಂಗ್ರೆಸ್‌ಗೆ ಮರಳಿದ ಬಾಬಾಸಾಹೇಬ

    ಎಂ.ಕೆ.ಹುಬ್ಬಳ್ಳಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿ, 25ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಪರಾಭವಗೊಂಡಿದ್ದ ಜಿಪಂ ಮಾಜಿ ಸದಸ್ಯ ಬಾಬಾಸಾಹೇಬ ಪಾಟೀಲ ಗುರುವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಸಲೀಮ್ ಅಹಮ್ಮದ್ ಸೇರಿ ಇನ್ನಿತರ ಗಣ್ಯರ ಸಮ್ಮುಖದಲ್ಲಿ ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಸೇರ್ಪಡೆಗೊಂಡಿದ್ದಾರೆ.

    ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠಗೊಳಿಸಲು ಜಿಲ್ಲಾ ಹಾಗೂ ರಾಜ್ಯ ನಾಯಕರು, ಬಾಬಾಸಾಹೇಬ ಪಾಟೀಲ ಅವರನ್ನು ಮುಖಂಡರ ಸಮ್ಮುಖದಲ್ಲಿ ಮತ್ತೆ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಇದರಿಂದ ಕಿತ್ತೂರು ಕಾಂಗ್ರೆಸ್‌ನಲ್ಲಿ ಹುಮ್ಮಸ್ಸು ಹುಟ್ಟಿದ್ದು, ಕಿತ್ತೂರು ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಚೈತನ್ಯ ಮೂಡಿಸಿದೆ.

    ಸೇರ್ಪಡೆಗೊಂಡ ಮುಖಂಡರ ವಿವರ: ಬಾಬಾಸಾಹೇಬ ಪಾಟೀಲ ಅವರ ಜತೆಗೆ ಜಿಪಂ ಮಾಜಿ ಸದಸ್ಯ ಎಫ್.ಎಫ್.ಸಕ್ರೆಣ್ಣವರ, ತಾಪಂ ಸದಸ್ಯ ಮುದಕಪ್ಪ ಮರಡಿ, ಶಂಕರ ಕಿಲ್ಲೇದಾರ, ಸಿದ್ದಪ್ಪ ಗೊರಕೊಳ್ಳಿ, ಸಂಗನಗೌಡ ಪಾಟೀಲ, ಈರಣ್ಣ ಕೊಡ್ಲಿ, ರುದ್ರಪ್ಪ ಸಂಗೊಳ್ಳಿ ಸೇರಿ 23ಕ್ಕೂ ಅಧಿಕ ಮುಖಂಡರು, ಜನಪ್ರತಿನಿಧಿಗಳು, ಕಾರ್ಯಕರ್ತರು ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

    ಈ ವೇಳೆ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಕಿತ್ತೂರು ಉಸ್ತುವಾರಿ ಬಂಗಾರೇಶ ಹಿರೇಮಠ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts