More

    ಉಡುಪಿಯಲ್ಲಿ ಹಿನ್ನೀರಲ್ಲಿ ತೇಲುವ ರೆಸ್ಟೋರೆಂಟ್ ಸ್ಥಾಪನೆ

    ಉಡುಪಿ: ಜಿಲ್ಲೆಯ ಸಮುದ್ರ ಹಾಗೂ ನದಿ ವ್ಯಾಪ್ತಿಯಲ್ಲಿನ ಹಿನ್ನೀರಿನ ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಣೆಗಾಗಿ ತೇಲುವ ರೆಸ್ಟೋರೆಂಟ್‌ಗಳನ್ನು ಸ್ಥಾಪಿಸಬಹುದಾಗಿದ್ದು, ಈ ಕುರಿತಂತೆ ಖಾಸಗಿ ಸಂಸ್ಥೆ, ವ್ಯಕ್ತಿಗಳಿಂದ ಆಸಕ್ತಿ ವ್ಯಕ್ತಪಡಿಸುವ ಕುರಿತು ಅರ್ಜಿ ಆಹ್ವಾನಿಸಿ, ನಂತರ ಟೆಂಡರ್ ಕರೆಯುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

    ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಡುಬಿದ್ರಿ ನಂತರ ಕುಂದಾಪುರದ ಕೋಡಿ ಬೀಚನ್ನು ಬ್ಲೂಫ್ಲ್ಯಾಗ್ ಮಾನ್ಯತೆ ಪಡೆಯುವ ಕುರಿತಂತೆ ಅಭಿವೃದ್ಧಿ ಪಡಿಸಲು ಪ್ರಾಥಮಿಕ ಸರ್ವೇ ನಡೆಸಲಾಗಿದೆ. ಪಡುವರಿ ಬೀಚ್ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ತಯಾರಿಸಲಾಗುತ್ತಿದೆ. ಒತ್ತಿನೆಣೆಯಲ್ಲಿ ಟ್ರೀಪಾರ್ಕ್, ರೆಸ್ಟೋರೆಂಟ್ ಸೇರಿದಂತೆ ವಿವಿಧ ಸೌಲಭ್ಯಗಳಿರುವ ಟೂರಿಸಂ ಹಬ್ ಮಾಡಲು ಮಾಸ್ಟರ್ ಪ್ಲಾನ್ ಮಾಡಲಾಗುತ್ತಿದೆ ಎಂದು ಡಿಸಿ ಹೇಳಿದರು.
    ತ್ರಾಸಿ ಮತ್ತು ಮರವಂತೆ ಕಡಲ ತೀರದಲ್ಲಿ ರಾಹೆ ಪಕ್ಕದಲ್ಲಿ ಗೂಡಂಗಡಿ ನಡೆಸುತ್ತಿರುವವರಿಗೆ ನಿರ್ಮಿಸಲಾಗಿರುವ ಅಂಗಡಿ ಮಳಿಗೆಗಳನ್ನು ಹಂಚಿಕೆ ಮಾಡಬೇಕು. ಕೋಸ್ಟಲ್ ಸರ್ಕ್ಯೂಟ್ ಯೋಜನೆಯಡಿ ಬಿಡುಗಡೆ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು. ಬೀಚ್‌ನಲ್ಲಿ ಕಾಮಗಾರಿ ನಿರ್ವಹಿಸುವಾಗ ಸಿ.ಆರ್.ಜಡ್ ನಿಯಮಗಳು ಉಲ್ಲಂಘನೆಯಾಗದಂತೆ, ಪರಿಸರ ಸ್ನೇಹಿ ಸಾಮಗ್ರಿ ಬಳಸಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಿ ಎಂದು ಡಿಸಿ ಸೂಚಿಸಿದರು.

    ಜಿಪಂ ಅಧ್ಯಕ್ಷ ದಿನಕರ ಬಾಬು, ಶಾಸಕ ಲಾಲಾಜಿ ಆರ್ ಮೆಂಡನ್, ಜಿಪಂ ಸದಸ್ಯ ಶಶಿಕಾಂತ ಪಡುಬಿದ್ರಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್ ಸಭೆಯಲ್ಲಿದ್ದರು.

    ಹೌಸ್‌ಬೋಟ್‌ಗೆ ಗರಿಷ್ಠ ಸಬ್ಸಿಡಿ
    ಹೌಸ್ ಬೋಟ್‌ಗಳ ಮೂಲಕ ಪ್ರವಾಸಿಗರನ್ನು ಹೆಚ್ಚು ಆಕರ್ಷಿಸಲು ಸಾಧ್ಯವಾಗಲಿದೆ. ಹೌಸ್ ಬೋಟ್ ಅಳವಡಿಸುವವರಿಗೆ ಗರಿಷ್ಠ ಪ್ರಮಾಣದ ಸಬ್ಸಿಡಿ ನೀಡುವ ಕುರಿತಂತೆ ಬಜೆಟ್ ಸಂದರ್ಭದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts