More

    ಲಾಳಗೊಂಡರಿಗೆ ಬುಡಕಟ್ಟು-ಹಿಂದುಳಿದ ಮೀಸಲಾತಿ ಕಲ್ಪಿಸಲಿ

    ಮಾನ್ವಿ: ಲಾಳಗೊಂಡ ಸಮುದಾಯದ ಪ್ರಮುಖ ಬೇಡಿಕೆಯಾದ ಸಮುದಾಯವನ್ನು ಜಾತಿ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸುತ್ತಾ ಬಂದಿದ್ದರೂ ಕ್ರಮ ಕೈಗೊಂಡಿಲ್ಲ. ಸರ್ಕಾರ ಕೂಡಲೇ ಈ ಕುರಿತು ಅಗತ್ಯ ಕ್ರಮಕೈಗೊಳ್ಳುವಂತೆ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಉಪಾಧ್ಯಕ್ಷ ಶಂಕರ ಬಿದರಿ ಒತ್ತಾಯಿಸಿದರು.

    ಪಟ್ಟಣದ ಟಿಎಪಿಸಿಎಂಎಸ್ ಮೈದಾನದಲ್ಲಿ ಅಖಿಲ ಕರ್ನಾಟಕ ಲಾಳಗೊಂಡ ಸಮಾಜದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ರಾಯಚೂರು ಜಿಲ್ಲಾ ಮಟ್ಟದ ಸಮಾವೇಶ ಉದ್ಘಾಟಿಸಿ ಭಾನುವಾರ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಲಾಳಗೊಂಡ ಸಮುದಾಯದ ಕುಲಶಾಸ್ತ್ರ ಅಧ್ಯಯನ ಕೈಗೊಂಡು ಬುಡಕಟ್ಟು ಅಥವಾ ಹಿಂದುಳಿದ ವರ್ಗಗಳ ಸ್ಥಾನಮಾನ ಕಲ್ಪಿಸಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ ಸವಲತ್ತು ದೊರೆಯಲಿದೆ ಎಂದರು.

    ಸಮುದಾಯದ ಪ್ರತಿಭಾನ್ವಿತ ಮತ್ತು ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಐಎಎಸ್, ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಲಾಳಗೊಂಡ ಐಎಎಸ್ ಆಕಾಡೆಮಿಯಿಂದ ಪ್ರತಿವರ್ಷ 50 ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಹಾಗೂ ಶಿಕ್ಷಣದ ನೆರವು ಒದಗಿಸುವುದಾಗಿ ಶಂಕರ ಬಿದರಿ ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts