ಹಿಂದೂ ದೇವರ ಬಗ್ಗೆ ಅಶ್ಲೀಲ ಕಮೆಂಟ್ ಹಾಕಿದವನ ಬಂಧನ

arrested
Published on

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಮೆಂಟ್ ಹಾಕಿದ ಆರೋಪಿಯನ್ನು ಸೆನ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.


ಬಿಕರ್ನಕಟ್ಟೆ ಮಸೀದಿ ಹಿಲ್ ರೋಡ್ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಬಂಧಿತ ಆರೋಪಿ. ಈತನನ್ನು 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಸೂಚನೆಯಂತೆ ಸೆನ್ ಇನ್‌ಸ್ಪೆಕ್ಟರ್ ಪ್ರಕಾಶ್ ಕಾರ್ಯಾಚರಣೆ ನಡೆಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net