‘ಬ್ಯಾಡ್’ನಲ್ಲಿ ನವಿರು ಪ್ರೇಮಗೀತೆ: ಪಿ.ಸಿ.ಶೇಖರ್ ನಿರ್ದೇಶನ ಸಿನಿಮಾದ ಎರಡನೇ ಗೀತೆ ಬಿಡುಗಡೆ

blank

ಬೆಂಗಳೂರು: ‘ರೋಮಿಯೋ’, ‘ಸ್ಟೈಲ್‌ಕಿಂಗ್’, ‘ಲವ್ ಬರ್ಡ್ಸ್’ ಬಳಿಕ ನಿರ್ದೇಶಕ ಪಿ.ಸಿ.ಶೇಖರ್ ಆ್ಯಕ್ಷನ್-ಕಟ್ ಹೇಳುತ್ತಿರುವ ಸಿನಿಮಾ ‘ಬ್ಯಾಡ್’. ಈ ಚಿತ್ರದಲ್ಲಿ ‘ರಾಯಭಾರಿ’ ಖ್ಯಾತಿಯ ನಕುಲ್ ಗೌಡ ಮುಖ್ಯಭೂಮಿಕೆಯಲ್ಲಿದ್ದು, ಅವರಿಗೆ ಮಾನ್ವಿತಾ ಹರೀಶ್ ಜೋಡಿಯಾಗಿದ್ದಾರೆ. ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ ಪೋಸ್ಟ್-ಪ್ರೊಡಕ್ಷನ್ ಕಾರ್ಯಗಳನ್ನು ಶುರು ಮಾಡಿಕೊಂಡಿದೆ. ಕೆಲ ತಿಂಗಳ ಹಿಂದೆ ‘ಬ್ಯಾಡ್’ ಚಿತ್ರದ ‘ಮಾತಿಗೂ ಮಾತಿಗೂ’ ಸಾಂಗ್ ಬಿಡುಗಡೆ ಮಾಡಲಾಗಿತ್ತು. ಈ ಪ್ರೇಮಗೀತೆಗೆ ಉತ್ತಮ ರೆಸ್ಪಾನ್ಸ್ ವ್ಯಕ್ತವಾದ ಬೆನ್ನಲ್ಲೇ ಚಿತ್ರತಂಡ ಮತ್ತೊಂದು ಸಾಂಗ್ ರಿಲೀಸ್ ಮಾಡಿದೆ. ‘ನೀ ಬರುವೆ ಅಂತಾ ನಾ ಕಾದು ಕುಂತ ಕ್ಷಣಗಳಿಗೆಲ್ಲ ಕವಿತೆಯಾಯಿತು ಒಲವೇ’ ಎಂದು ಸಾಗುವ ಈ ಗೀತೆಯನ್ನು ಕವಿರಾಜ್ ರಚಿಸಿದ್ದು, ಅರ್ಜುನ್ ಜನ್ಯ ಸಂಗೀತದಲ್ಲಿ ಪೃಥ್ವಿ ಭಟ್ ಧ್ವನಿಯಾಗಿದ್ದಾರೆ. ನಾಯಕ ನಕುಲ್ ಮತ್ತು ನಾಯಕಿ ಮಾನ್ವಿತಾ ನಡುವಿನ ರೊಮ್ಯಾಂಟಿಕ್ ಸನ್ನಿವೇಶಗಳನ್ನು ಈ ಹಾಡಿನಲ್ಲಿ ಚಿತ್ರೀಕರಿಸಲಾಗಿದೆ. ಶೇಖರ್, ‘ನಾಯಕನ ಬರುವಿಕೆಗಾಗಿ ಕಾದು ಕುಳಿತಿರುವ ನಾಯಕಿ. ಕಾಯುವಿಕೆಯಲ್ಲಿ ಏನೆಲ್ಲಾ ಕಲ್ಪಿಸಿಕೊಳ್ಳುತ್ತಾಳೆ ಎಂಬುದನ್ನು ಈ ಹಾಡಿನ ಮೂಲಕ ತೋರಿಸಲಾಗಿದೆ. ಕಾಮ, ಕ್ರೋಧ ಮೊದಲಾದ ಅಡಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಲ್ಲಿ ಆರು ಜನ ಕಲಾವಿದರು ಅಭಿನಯಿಸಿರುವುದು ವಿಶೇಷ’ ಎನ್ನುತ್ತಾರೆ. ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್, ಅಶ್ವಿನಿ ಕಲಾ ಬಳಗದಲ್ಲಿದ್ದಾರೆ. ಪಿ.ಸಿ.ಶೇಖರ್ ನಿರ್ದೇಶನದ ಜತೆಗೆ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ.

Share This Article

ನಿಮ್ಮ ಸಂಪತ್ತು ವೃದ್ಧಿಯಾಗಬೇಕಾ? ಅಕ್ಷಯ ತೃತೀಯದಂದು ಹೀಗೆ ಮಾಡಬೇಕು… Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಹಿಂದೂಗಳು ಬಹಳ ಪವಿತ್ರವೆಂದು ಪರಿಗಣಿಸುತ್ತಾರೆ. ಈ ಅಕ್ಷಯ ತೃತೀಯ…

ರಾತ್ರಿ ಏನೂ ತಿನ್ನದೆ ಮಲಗುತ್ತಿದ್ದೀರಾ? ಆದರೆ ನೀವು ಖಂಡಿತವಾಗಿಯೂ ಈ ವಿಷಯಗಳನ್ನು ತಿಳಿದುಕೊಳ್ಳಬೇಕು…Health Tips

Health Tips: ಇತ್ತೀಚೆಗೆ, ಅನೇಕ ಜನರು ಸಮಯದ ಅಭಾವ, ಹಸಿವಿನ ಅಭಾವ, ಉದ್ವೇಗ ಸೇರಿದಂತೆ ವಿವಿಧ…

ದಿನಾ ಒಂದು ಮೊಟ್ಟೆ ತಿನ್ನಿರಿ; ದೇಹದ ಸಕಾರಾತ್ಮಕ ಬದಲಾಣೆಗಳನ್ನು ಒಮ್ಮೆ ನೋಡಿ!: | Positive Changes

Positive Changes : ಮೊಟ್ಟೆಗಳನ್ನು ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಪ್ರೋಟೀನ್, ಜೀವಸತ್ವಗಳು ಮತ್ತು…