ಪುಣೆ: ಅನುಭವಿ ಬ್ಯಾಟರ್ ಕೇನ್ ವಿಲಿಯಮ್ಸನ್ ಭಾರತ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಅವರು ಗಾಯದಿಂದಾಗಿ ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನೂ ತಪ್ಪಿಸಿಕೊಂಡಿದ್ದರು. ಕಳೆದ ಶ್ರೀಲಂಕಾ ಪ್ರವಾಸದಲ್ಲಿ ಗಾಯಗೊಂಡಿದ್ದ ವಿಲಿಯಮ್ಸನ್ ಇನ್ನು ನವೆಂಬರ್ 1ರಿಂದ ಮುಂಬೈನಲ್ಲಿ ನಡೆಯಲಿರುವ ಕೊನೇ ಟೆಸ್ಟ್ಗೆ ಫಿಟ್ ಆಗುವ ನಿರೀಕ್ಷೆ ಇದೆ.
ಕೇನ್ ಗೈರಿನಲ್ಲಿ ಬೆಂಗಳೂರಿನಲ್ಲಿ 3ನೇ ಕ್ರಮಾಂಕದಲ್ಲಿ ಆಡಿದ್ದ ವಿಲ್ ಯಂಗ್ (33, 48*) ಉತ್ತಮ ನಿರ್ವಹಣೆಯನ್ನೇ ತೋರಿದ್ದರು. ಹೀಗಾಗಿ ಶೇ. 100 ಫಿಟ್ ಆಗುವವರೆಗೆ ಕೇನ್ ಮರಳಿ ಕಣಕ್ಕಿಳಿಯುವುದಿಲ್ಲ ಎಂದು ಕಿವೀಸ್ ಕೋಚ್ ಗ್ಯಾರಿ ಸ್ಟೆಡ್ ತಿಳಿಸಿದ್ದಾರೆ.
ಕರ್ನಾಟಕ ಕಿರಿಯರ ತಂಡಕ್ಕೆ ರಾಹುಲ್ ದ್ರಾವಿಡ್ ಪುತ್ರ ಸಮಿತ್ ಉಪನಾಯಕ!