More

    ಬಾದಾಮಿ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿದ್ದೇ ಬಿಜೆಪಿ ನಾಯಕರು: ಸ್ಪೋಟಕ ಹೇಳಿಕೆ ಕೊಟ್ಟ ಸಚಿವ ಶ್ರೀರಾಮುಲು

    ಚಿತ್ರದುರ್ಗ: ಬಾದಾಮಿ ಕ್ಷೇತ್ರದಲ್ಲಿ ನನ್ನ ಸೋಲಿಸಿದ್ದು ಜನರಲ್ಲ, ಬಿಜೆಪಿ ನಾಯಕರೇ ನನ್ನನ್ನು ಸೋಲಿಸಿದರು ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಸ್ಪೋಟಕ ಹೇಳಿಕೆ ನೀಡಿದ್ದಾರೆ.

    ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ಮೋದಿ, ಅಮಿತ್ ಶಾ ಅಂತಹವರು ಮಾತ್ರ ಎರಡು ಕಡೆ ಸ್ಪರ್ಧೆ ಮಾಡುತ್ತಾರೆ. ಶ್ರೀರಾಮುಲು ವಾಲ್ಮೀಕಿ ನಾಯಕ ಸಮಾಜದ ಸಣ್ಣ ಕುಲದವನು. ಶ್ರೀರಾಮುಲು ಗೆದ್ದರೆ ನಮಗೆ ಮುಳ್ಳು ಆಗ್ತಾನೆಂದು ಬಿಜೆಪಿಯವರೇ ನನ್ನನ್ನು ಸೋಲಿಸಿದರು ಎಂದರು.

    ಬಾದಾಮಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು 1400 ಅಲ್ಪ ಮತಗಳಿಂದ ಸೋತಿದ್ದೇನೆ. ಬಾದಾಮಿಯಲ್ಲಿ ಸೋತ ವೇಳೆ ಮೊಳಕಾಲ್ಮೂರು ಜನ ಕೈಹಿಡಿದರು. 48 ಸಾವಿರ ಮತಗಳಿಂದ ಗೆಲ್ಲಿಸಿದ್ದನ್ನು ನಾನು ಮರೆಯುವುದಿಲ್ಲ. ನಾನು ಜೀವ ಬಿಡುತ್ತೇನೆಯೇ ಹೊರತು ನಿಮ್ಮ ವಿಶ್ವಾಸ ಕಳೆದುಕೊಳ್ಳಲ್ಲ ಎಂದು ಮೊಳಕಾಲ್ಮೂರು ಕ್ಷೇತ್ರದಜನರಿಗೆ ಶ್ರೀರಾಮುಲು ಭರವಸೆ ನೀಡಿದರು.

    ಕೋಟಿ ಮೌಲ್ಯದ ಜಮೀನು ದಾನ ಕೊಡ್ತೀನಿ, ತಾಕತ್​ ಇದ್ರೆ ರಾಮಮಂದಿರ ಕಟ್ಟಿಸಿ: ಸಿದ್ದುಗೆ ರೈತನ ಸವಾಲು

    ಡೆತ್​ನೋಟ್​ ಬರೆದಿಟ್ಟು ಹೈಸ್ಕೂಲ್​ ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಶಿಕ್ಷಕ

    ವಿಪಿಎಲ್ ಸೀಸನ್-2 ಜೋಶ್; ಇಂದು ಅಂತಿಮ ಸ್ಪರ್ಧೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts