More

    ಕೇಂದ್ರ ಸರ್ಕಾರದ ನೀತಿಗೆ ಖಂಡನೆ

    ಬಾದಾಮಿ: ಕೇಂದ್ರ ಸರ್ಕಾರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕರೆ ನೀಡಿದ ಅಖಿಲ ಭಾರತ ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು, ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರು ಸೇರಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ತಾಪಂ ಇಒ ಡಾ.ಪುನೀತ ಅವರಿಗೆ ಮನವಿ ಸಲ್ಲಿಸಿದರು.

    ಅಕ್ಕಮಹಾದೇವಿ ಕಲ್ಯಾಣ ಮಂಟಪದಿಂದ ಹೊರಟ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

    ಗ್ರಾ.ಪಂ. ನೌಕರರ ಸಂಘದ ಅಧ್ಯಕ್ಷ ಶೀಲಾಧರ ನಾಯಕ ಮಾತನಾಡಿ, ಗ್ರಾಪಂ ನೌಕರರ ಬಾಕಿ ವೇತನ ಬಿಡುಗಡೆ, ಅಂಗನವಾಡಿ ಕಾರ್ಯಕರ್ತೆಯರ ಕಾಯಂಮಾತಿ, 21 ಸಾವಿರ ವೇತನ ರೂ., 10 ಸಾವಿರ ರೂ. ಪಿಂಚಣಿ ಯೋಜನೆ ನೀಡುವುದು, ಗ್ರಾಪಂಗೆ ಶೇ.95 ಅನುದಾನ ಕಡಿತ ಹಾಗೂ ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯುವುದು, ಶಿಕ್ಷಣ, ಆರೋಗ್ಯ, ವಿಮೆ, ಬ್ಯಾಂಕ್ ಸೇವೆಗಳಲ್ಲಿ ಖಾಸಗೀಕರಣ ಮಾಡಬಾರದು, ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಕುಟುಂಬಗಳಿಗೆ ಮಾಸಿಕ 7500 ರೂ. ನೆರವು ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

    ಪ್ರಧಾನ ಕಾರ್ಯದರ್ಶಿ ಕೆ.ಕೆ. ಕಳಕನಗೌಡರ, ಅಕ್ಷರ ದಾಸೋಹ ಅಧ್ಯಕ್ಷೆ ಕಸ್ತೂರಿ ಗುಣೋಜಿ, ಆರ್.ಎಚ್. ಮುದಗಲ್ಲ, ಕಮಲಾ ದೇವರಮನಿ ಸೇರಿ ಇತರರು ಇದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts