More

    ನಿಷ್ಠೆ, ಪ್ರಾಮಾಣಿಕತೆ ಸಂದ ಗೌರವ

    ಬಾದಾಮಿ: ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದರಿಂದ ಮಾಧವ ನಾಯಕ ಅವರಿಗೆ ಆತಿಥ್ಯ ರತ್ನ ಪ್ರಶಸ್ತಿ ದೊರೆತಿದೆ ಎಂದು ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಹೇಳಿದರು.

    ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಹೋಟೆಲ್ ಮತ್ತು ಉಪಾಹಾರ ಮಂದಿರಗಳ ಸಂಘ, ನಾಯಕ ಪರಿವಾರದ ಹಿತೈಷಿಗಳ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಆತಿಥ್ಯ ರತ್ನ-2019 ಪ್ರಶಸ್ತಿ ಪುರಷ್ಕೃತ ಮಾಧವ ಗೋವಿಂದ ನಾಯಕ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

    ಹೋಟೆಲ್ ಉದ್ಯಮ ಒಂದು ಸೇವೆ. ಸತತ ಪರಿಶ್ರಮದ ಲವಾಗಿ ಮಾಧವ ನಾಯಕ ಅವರಿಗೆ ಪ್ರಶಸ್ತಿ ಲಭಿಸಿದೆ. ವ್ಯಕ್ತಿಯ ಕ್ರಿಯಾಶೀಲತೆಗೆ ಇದು ಸಾಕ್ಷಿಯಾಗಿದೆ. ಈ ಸನ್ಮಾನ ಪ್ರತಿಯೊಬ್ಬರಿಗೂ ಸಲ್ಲುತ್ತದೆ ಎಂದರು.

    ವೀರಪುಲಿಕೇಶಿ ಸಂಸ್ಥೆ ಚೇರ್ಮನ್ ಎ.ಸಿ. ಪಟ್ಟಣದ ಮಾತನಾಡಿ, ಹೋಟೆಲ್ ಉದ್ಯಮ ನಡೆಸುವುದು ತುಂಬಾ ಕಠಿಣವಿದೆ. ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

    ಸಂಘದ ಅಧ್ಯಕ್ಷ ಎಚ್.ಅರುಣಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಸದ ಪಿ.ಸಿ. ಗದ್ದಿಗೌಡರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಮಮದಾಪುರ, ಕಾಳಿದಾಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಭೀಮಸೇನ ಚಿಮ್ಮನಕಟ್ಟಿ, ಸಂಘದ ಜಿಲ್ಲಾಧ್ಯಕ್ಷ ವಿಶ್ವನಾಥ ದಾಸ ಮಾತನಾಡಿದರು. ಪುರಸಭೆ ಸದಸ್ಯ ನಾಗರಾಜ ಕಾಚೆಟ್ಟಿ ಸ್ವಾಗತಿಸಿದರು. ಸಂಸ್ಥೆ ಸಂಚಾಲಕ ಕೃಷ್ಣಮೂರ್ತಿ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಉಜ್ವಲ ಬಸರಿ ನಿರೂಪಿಸಿದರು. ವಿವೇಕಾನಂದ ನಾಯಕ ವಂದಿಸಿದರು.

    ಬಾದಾಮಿ, ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದರಿಂದ ಮಾಧವ ನಾಯಕ ಅವರಿಗೆ ಆತಿಥ್ಯ ರತ್ನ ಪ್ರಶಸ್ತಿ ದೊರೆತಿದೆ ಎಂದು ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಹೇಳಿದರು.

    ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಹೋಟೆಲ್ ಮತ್ತು ಉಪಾಹಾರ ಮಂದಿರಗಳ ಸಂಘ, ನಾಯಕ ಪರಿವಾರದ ಹಿತೈಷಿಗಳ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಆತಿಥ್ಯ ರತ್ನ-2019 ಪ್ರಶಸ್ತಿ ಪುರಷ್ಕೃತ ಮಾಧವ ಗೋವಿಂದ ನಾಯಕ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts