ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ

ಬಾದಾಮಿ: ತಾಲೂಕಿನ ಮುಷ್ಠಿಗೇರಿ ಗ್ರಾಮದಲ್ಲಿ ಶುಕ್ರವಾರ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ತಂಡ ಬರ ಅಧ್ಯಯನ ನಡೆಸಿತು. ಗ್ರಾಮದ ಕೆರೆ ಮತ್ತು ರಾಜ್ಯ ಹೆದ್ದಾರಿಯಲ್ಲಿನ ಬೆಳೆಗಳನ್ನು ವೀಕ್ಷಿಸಿ ಬರ ನಿರ್ವಹಣೆ ಕುರಿತು ಅಕಾರಿಗಳಿಂದ ಮಾಹಿತಿ ಪಡೆದರು.

ರೈತರಿಂದ ಮಾಹಿತಿ ಪಡೆದು, ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸಂಗ್ರಹ, ಗೋಶಾಲೆ ಸೇರಿ ಇನ್ನಿತರ ಮಹತ್ವದ ವಿಷಯಗಳ ಬಗ್ಗೆ ಅಕಾರಿಗಳೊಂದಿಗೆ ಚರ್ಚಿಸಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡಿ ಗ್ರಾಮೀಣ ಜನರು ಗುಳೆ ಹೋಗುವುದನ್ನು ತಡೆಯಬೇಕು.
ಜನರಿಗೆ ಕಡ್ಡಾಯವಾಗಿ ಜಾಬ್ ಕಾರ್ಡ್ ನೀಡಿ ಕೆರೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಂಡು ಉದ್ಯೋಗ ಒದಗಿಸಬೇಕು. ಆದರೆ, ಇದ್ಯಾವ ಕೆಲಸ ಇಲ್ಲಿ ಆಗಿಯೇ ಇಲ್ಲ. ಬರ ಇದ್ದಾಗಲೂ ಕ್ಷೇತ್ರದ ಶಾಸಕರು ಮತ್ತು ಸಂಬಂಸಿದ ಅಕಾರಿಗಳು ಸಂಪೂರ್ಣ ನಿರ್ಲಕ್ಷ ವಹಿಸಿದ್ದಾರೆ ಎಂದು ಬಿಎಸ್‌ವೈ ದೂರಿದರು.

ಜನ ಜಾನುವಾರುಗಳಿಗೆ ಕುಡಿಯುವ ನೀರು, ದುಡಿಯುವ ಕೈಗಳಿಗೆ ಕೆಲಸ ಕೊಡುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಿ ಎಂದು ಅಕಾರಿಗಳಿಗೆ ಸೂಚಿಸಿದರು.

Leave a Reply

Your email address will not be published. Required fields are marked *