More

    ಮಾತೃ ಭಾಷೆ ಕಲಿಕೆ ಸದೃಢವಾಗಿರಲಿ

    ಬಾದಾಮಿ: ಕನ್ನಡ ಭಾಷೆಯನ್ನು ಪ್ರತಿದಿನ ಬಳಕೆ ಮಾಡುವ ಮೂಲಕ ಗೌರವಿಸಿದರೆ ತನ್ನಿಂದ ತಾನೇ ಬೆಳೆಯುತ್ತದೆ. ಮನೆಯೇ ಮೊದಲ ಪಾಠಶಾಲೆಯಾಗಿದ್ದು, ಪಾಲಕರು ಮಕ್ಕಳಿಗೆ ಕನ್ನಡ ಭಾಷೆಯನ್ನು ಪರಿಣಾಮಕಾರಿಯಾಗಿ ಕಲಿಸಲು ಮುಂದಾಗಬೇಕು ಎಂದು ತಹಸೀಲ್ದಾರ್ ಸುಹಾಸ ಇಂಗಳೆ ಹೇಳಿದರು.

    ಇಲ್ಲಿನ ತಾಲೂಕಾಡಳಿತದಲ್ಲಿ ತಾಲೂಕು ಆಡಳಿತ ವತಿಯಿಂದ ಭಾನುವಾರ ಆಯೋಜಿಸಿದ್ದ 65ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಮಾತನಾಡಿದ ಅವರು, ಆಂಗ್ಲ ಭಾಷೆ ಸೇರಿ ಇತರ ಭಾಷೆಗಳನ್ನು ಗೌರವಿಸುವುದರ ಜತೆಗೆ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಮಕ್ಕಳ ಭವಿಷ್ಯ ಉಜ್ವಲಗೊಳ್ಳುತ್ತದೆ. ಮಾತೃ ಭಾಷೆ ಕನ್ನಡಕ್ಕೆ ಗೌರವ ತರುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕು. ಕನ್ನಡದಲ್ಲಿ ಇದ್ದಷ್ಟು ಸದೃಢತೆ ಬೇರೆ ಭಾಷೆಯಲ್ಲಿ ಇಲ್ಲ. ನಾವು ಕನ್ನಡಿಗರು ಎಂಬುದನ್ನು ಅರಿತು ಮಕ್ಕಳಿಗೆ ಶಿಕ್ಷಣ ಒದಗಿಸುವ ಕ್ರಮವನ್ನು ಪಾಲಕರು ಪಾಲಿಸಬೇಕು ಎಂದರು.

    ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ರವಿ ಕಂಗಳ, ಸಿಪಿಐ ರಮೇಶ ಹಾನಾಪುರ, ಪಿಎಸ್‌ಐ ಪ್ರಕಾಶ ಬನಕಾರ, ದೈಹಿಕ ಶಿಕ್ಷಣಾಧಿಕಾರಿ ವಿವೇಕಾನಂದ ಮೇಟಿ, ಸದಾಶಿವ ಮರಡಿ, ಸುಭಾಸ ಅವರಾದಿ, ಮಹೇಶ ವಡ್ಡರ, ರಮೇಶ ಬೀಳಗಿ ಸೇರಿ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts