More

    ಚಿತ್ರೀಕರಣವೂ ಮುಗಿಯಿತು, ಡಾಲಿ ಕಡೆಯಿಂದ ಉಡುಗೊರೆಯೂ ಸಿಕ್ಕಿತು…

    ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಚಿತ್ರಗಳು ನಿರ್ಮಾಣವಾಗುತ್ತವೆ. ಆದರೆ ಚಿತ್ರಕ್ಕಾಗಿ ದುಡಿದವರನ್ನು ನೆನಪಿಸಿಕೊಳ್ಳುವುದು ತುಂಬ ವಿರಳ.‌ ಆದರೆ ‘ಬಡವ ರಾಸ್ಕಲ್’ ಚಿತ್ರದ ನಿರ್ಮಾಪಕ ಮತ್ತು ನಾಯಕ ಡಾಲಿ ಧನಂಜಯ ಚಿತ್ರೀಕರಣದ ಕೊನೆಯ ದಿವಸ ಚಿತ್ರಕ್ಕಾಗಿ ದುಡಿದ ನೂರಕ್ಕೂ ಹೆಚ್ಚು ಕಾರ್ಮಿಕರಿಗೆ ದಿನಬಳಕೆಯ ‌ವಸ್ತುಗಳಾದ ಕುಕ್ಕರ್, ತವ, ಹಾಟ್ ವಾಟರ್ ಬಾಟಲ್ ಮುಂತಾದ ವಸ್ತುಗಳನ್ನು ಉಡುಗೊರೆ ನೀಡಿದ್ದಾರೆ.

    ಇದನ್ನೂ ಓದಿ: VIDEO | ಮುತ್ತಯ್ಯ ಮುರಳೀಧರನ್ ಬಯೋಪಿಕ್ ಹೆಸರು, ಮೋಷನ್ ಪೋಸ್ಟರ್ ಅನಾವರಣ

    ಧನಂಜಯ ಅವರ ಈ ಗುಣವನ್ನು ಚಿತ್ರಕ್ಕಾಗಿ ದುಡಿದ ಕಾರ್ಮಿಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನದಲ್ಲಿ ನಡೆಯುವ ಘಟನೆಗಳೇ ಈ ಚಿತ್ರದ ಕಥಾಹಂದರ. ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಸಾವಿತ್ರಮ್ಮ ಅಡವಿಸ್ವಾಮಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

    ಶಂಕರ್ ಗುರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಶಂಕರ್ ಗುರು ಅವರೇ ಬರೆದಿದ್ದಾರೆ. ‘ಬಡವ ರಾಸ್ಕಲ್’ ಇವರಿಗೆ ಚೊಚ್ಚಲ ನಿರ್ದೇಶನದ ಚಿತ್ರ. ಡಾಲಿ ಧನಂಜಯ ಹಾಗೂ ಶಂಕರ್ ಗುರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಪ್ರೀತ ಜಯರಾಮನ್ ಛಾಯಾಗ್ರಹಣ, ನಿರಂಜನ್ ದೇವರಮನೆ ಸಂಕಲನ ಹಾಗೂ ವಿನೋದ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

    ಇದನ್ನೂ ಓದಿ: ‘ಆಗ ಸಫರ್​ ಆಗೋ ಜೋಕರ್​ ನೀವೇ..’; ನಟ ರಮೇಶ್​ ಅರವಿಂದ್ ‘ಗುರಿ’ ಇಟ್ಟು ಹೇಳಿದ್ದು ಯಾರಿಗೆ?

    ಡಾಲಿ ಧನಂಜಯ ಅವರಿಗೆ ನಾಯಕಿಯಾಗಿ ಅಮೃತ ಅಯ್ಯಂಗಾರ್ ಅಭಿನಯಿಸಿದ್ದಾರೆ. ರಂಗಾಯಣ ರಘು, ತಾರಾ, ಸ್ಪರ್ಶ ರೇಖಾ, ನಾಗಭೂಷಣ್, ಪೂರ್ಣಚಂದ್ರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ‌. ಬೆಂಗಳೂರು, ಮೈಸೂರು ಹಾಗೂ ಪಾಂಡವಪುರದಲ್ಲಿ ಚಿತ್ರದ ಪೂರ್ತಿ ಚಿತ್ರೀಕರಣ ಮಾಡಲಾಗಿದೆ.

    ‘ಕನ್ನಡಿಗ ರವಿಚಂದ್ರನ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts