More

    ಬ್ಯಾಡ್ಮಿಂಟನ್​ ತಾರೆ ಪಿ.ವಿ.ಸಿಂಧುಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ

    ನವದೆಹಲಿ: ಎರಡು ಬಾರಿ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆಯಾದ ಬ್ಯಾಡ್ಮಿಂಟನ್​ ಚ್ಯಾಂಪಿಯನ್​ ಪಿ.ವಿ.ಸಿಂಧು ಅವರಿಗೆ ಇಂದು ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಪದ್ಮ ಪ್ರಶಸ್ತಿಗಳ ವಿತರಣೆಗೆ ಆಯೋಜಿಸಿದ್ದ ವಿಶೇಷ ಸಮಾರಂಭದಲ್ಲಿ ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್​ ಅವರು ಪ್ರಶಸ್ತಿ ಪ್ರದಾನಿಸಿದರು.

    ಇತ್ತೀಚೆಗೆ ಜಪಾನಿನ ಟೋಕಿಯೋದಲ್ಲಿ ನಡೆದ 2020 ಒಲಿಂಪಿಕ್ಸ್​ನಲ್ಲಿ ಚೀನಾದ ಹೆ ಬಿಂಗ್​ಜಿಯಾಒರನ್ನು ಮಣಿಸಿ ಸಿಂಧು ಕಂಚಿನ ಪದಕ ಗೆದ್ದಿದ್ದರು. 2016ರ ರಿಯೋ ಒಲಿಂಪಿಕ್ಸ್​ನಲ್ಲಿ ಫೈನಲ್ಸ್​ ತಲುಪಿದ ಮೊದಲ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿ, ಸ್ಪೇನ್‌ನ ಕ್ಯಾರೊಲಿನಾ ಮರಿನ್‌ ವಿರುದ್ಧ ಸೋತು ಬೆಳ್ಳಿ ಪದಕ ಗೆದ್ದಿದ್ದರು. ಜೊತೆಗೆ, ಹಲವು ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾರತಕ್ಕೆ ಕೀರ್ತಿ ತಂದಿದ್ದಾರೆ.

    ಸಿಂಧು ಈಗಾಗಲೇ ಅತ್ಯುನ್ನತ ಕ್ರೀಡಾ ಗೌರವವಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪಡೆದಿದ್ದಾರೆ. ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಜನವರಿ 2020 ರಲ್ಲಿ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿರುವ ಪದ್ಮಭೂಷಣ ಪ್ರಶಸ್ತಿಯನ್ನು ಅವರಿಗೆ ಘೋಷಿಸಲಾಗಿದ್ದು, ಇಂದು ಪ್ರದಾನಿಸಲಾಯಿತು. (ಏಜೆನ್ಸೀಸ್)

    ಬಳ್ಳಾರಿಯಲ್ಲಿ ಪುನೀತ್​ ಹೆಸರಲ್ಲಿ ಉಚಿತ ಶಾಲೆ: ಜನಾರ್ಧನ ರೆಡ್ಡಿ

    ದಾಖಲೆ ಮೊತ್ತಕ್ಕೆ ಮಾರಾಟವಾದ ಬಂಡೂರು ಟಗರು; ಬೆಲೆ ಎಷ್ಟು ಗೊತ್ತೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts