ಕ್ರೀಡಾ ಸೌಲಭ್ಯ ಸದ್ಬಳಕೆ ಅಗತ್ಯ

mudugiliyar
ಬ್ರಹ್ಮಾವರ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಬಾಲ್ ಬ್ಯಾಂಡ್ಮಿಂಟನ್ ಪಂದ್ಯಾಟ ಕಾರ್ಯಕ್ರಮವನ್ನು ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಬ್ರಹ್ಮಾವರ ತಾಲೂಕಿನ ದೈಹಿಕ ಪರಿವೀಕ್ಷಣಾಧಿಕಾರಿ ಪದ್ಮಾವತಿ ಹಾಗೂ ಬಿಆರ್‌ಸಿ ಕೋ ಆರ್ಡಿನೇಟರ್ ಅರ್ಚನಾ ಹೆಗ್ಡೆ, ಉದ್ಯಮಿಗಳಾದ ಬಡಾಮನೆ ರತ್ನಾಕರ ಶೆಟ್ಟಿ, ಗುತ್ತಿಗೆದಾರ ಕೆ.ಆರ್.ರತ್ನಾಕರ್ ನಾಯಕ್ ಮತ್ತಿತರರು ಇದ್ದರು
Published on

ಕೋಟ: ಕ್ರೀಡಾ ಕ್ಷೇತ್ರದಲ್ಲಿ ಪ್ರತಿಯೋರ್ವ ವಿದ್ಯಾರ್ಥಿ ಭಾಗಿಯಾಗಿ ಆ ಮೂಲಕ ರಾಜ್ಯ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಜಲುಗಳನ್ನು ದಾಟಬೇಕು. ಸರ್ಕಾರ ಕ್ರೀಡೆಗೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಹೇಳಿದರು.

ಮೂಡುಗಿಳಿಯಾರು ಶಾಲಾ ಕ್ರೀಡಾಂಗಣದಲ್ಲಿ ಜಿಪಂ ಉಡುಪಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಚೇರಿ, ರಜತಾದ್ರಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಸರ್ಕಾರಿ ಸಂಯುಕ್ತ ಪ್ರೌಢಶಾಲೆ, ಮೂಡುಗಿಳಿಯಾರು-ಕೋಟ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಮಂಗಳವಾರ ಮಾತನಾಡಿದರು.

ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ತಾಲೂಕಿನ ದೈಹಿಕ ಪರಿವೀಕ್ಷಣಾಧಿಕಾರಿ ಪದ್ಮಾವತಿ ಹಾಗೂ ಬಿಆರ್‌ಸಿ ಕೋ ಆರ್ಡಿನೇಟರ್ ಅರ್ಚನಾ ಹೆಗ್ಡೆ, ಉದ್ಯಮಿಗಳಾದ ಬಡಾಮನೆ ರತ್ನಾಕರ ಶೆಟ್ಟಿ, ಗುತ್ತಿಗೆದಾರ ಕೆ.ಆರ್.ರತ್ನಾಕರ್ ನಾಯಕ್, ನಿವೃತ್ತ ಮುಖ್ಯ ಶಿಕ್ಷಕ ಶಿವರಾಮ್ ಭಟ್, ಕೋಟ ಗ್ರಾಪಂ ಸದಸ್ಯ ಶೇಖರ್ ಜಿ.ಶಾಲಾ ಎರಡು ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷರಾದ ಯೋಗೇಂದ್ರ ಪೂಜಾರಿ, ವೆಂಕಟೇಶ ಅಡಿಗ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಶಿಕ್ಷಕಿ ವಸಂತಿ ಮತ್ತಿತರರು ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯಶಿಕ್ಷಕಿ ಇಂದಿರಾ ಸ್ವಾಗತಿಸಿ, ದೈಹಿಕ ಶಿಕ್ಷಕ ಶೇಖರ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net