ಉಪಚುನಾವಣೆ ಬಳಿಕ ಬಿಎಸ್​ವೈ ಸಿಎಂ

<< ಮೈಸೂರು ಸಂಸದ ಪ್ರತಾಪ ಸಿಂಹ ಹೇಳಿಕೆ > ಸಿದ್ದಾಪುರದಲ್ಲಿ ಬಿಜೆಪಿ ಪರ ಪ್ರಚಾರ >>

ಜಮಖಂಡಿ: ಶ್ರೀಕಾಂತ ಕುಲಕರ್ಣಿ ಆಯ್ಕೆಯಾಗುವ ಮೂಲಕ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ಹೇಳಿದರು.

ತಾಲೂಕಿನ ಸಿದ್ದಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ ಕುಲಕರ್ಣಿ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು. ಜಮಖಂಡಿ ಕ್ಷೇತ್ರದಲ್ಲಿ ಜಾತ್ಯತೀತ ನಾಯಕರಾಗಿ ಎಲ್ಲ ಸಮುದಾಯವನ್ನು ಸಮಾನವಾಗಿ ಕಂಡು ಕಾರ್ಯ ನಿರ್ವಹಿಸುತ್ತಾರೆ. ಎಲ್ಲರೂ ಅವರಿಗೆ ಬೆಂಬಲ ನೀಡಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಒಂದೇ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಕಾರ್ಯಕರ್ತರೇ ಬೆಳೆಸಿದ ಪಕ್ಷವಾಗಿದೆ. ಸಮ್ಮಿಶ್ರ ಸರ್ಕಾರದ ಒಳಜಗಳದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿವೆ ಎಂದರು.

ಮೈಸೂರು ಜಿಲ್ಲೆ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು 11 ಸಾವಿರ ಕೋಟಿ ರೂ. ಅನುದಾನ ನೀಡಿದ್ದಾರೆ. ಅದರಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.

ಬಿ.ಎಸ್. ಯಡಿಯೂರಪ್ಪ ಆಡಳಿತದಲ್ಲಿ ಭಾಗ್ಯಲಕ್ಷ್ಮಿ ಯೋಜನೆ, ರೈತರಿಗೆ ಉಚಿತ ವಿದ್ಯುತ್ ಸೇರಿ ಹಲವಾರು ಯೋಜನೆ ನೀಡಿದ್ದಾರೆ. ಆದರೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ರಾಜ್ಯಕ್ಕೆ ಜಾತಿಯ ಯೋಜನೆಗಳನ್ನು ನೀಡಿದ್ದಾರೆ. ಮತ್ತೆ ಸಿಎಂ ಆಗುತ್ತೇನೆ ಎಂದು ತೊಡೆ ತಟ್ಟಿ ಹೇಳುತ್ತಿದ್ದ ಸಿದ್ದರಾಮಯ್ಯನವರು ಸ್ವಕ್ಷೇತ್ರದಲ್ಲೇ ಹೀನಾಯವಾಗಿ ಸೋಲು ಕಂಡು ಗರ್ವಭಂಗಕ್ಕೊಳಗಾಗಿದ್ದಾರೆ ಎಂದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬದ 8 ಜನ ಸದಸ್ಯರು ಒಂದೊಂದು ಅಧಿಕಾರ ಹಿಡಿದುಕೊಂಡು ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ ಅವರು, ಶ್ರೀಕಾಂತ ಕುಲಕರ್ಣಿ ಅವರು ಹನುಮಂತರಾಯ ಬಿರಾದಾರ, ಶಂಕರ ಹುನ್ನೂರ ಮತ್ತಿತರರಿದ್ದರು.