23.2 C
Bangalore
Saturday, December 14, 2019

ಸೋಲಿನ ಸರಪಳಿಯಿಂದ ಹೊರಬರುವ ವಿಶ್ವಾಸ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ಬಾಗಲಕೋಟೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಹತಾಶೆಯಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅನೇಕ ನಾಯಕರ ವಿರುದ್ಧ ಮಾತನಾಡಿದ್ದರು. ತಪ್ಪು ಕಲ್ಪನೆಯಿಂದ ಹೇಳಿಕೆ ನೀಡಿದ್ದೆ ಎಂದು ಬಹಿರಂಗವಾಗಿಯೇ ಅವರು ಕ್ಷಮೆಯಾಚನೆ ಮಾಡಿದ್ದಾರೆ. ಕಹಿ ಘಟನೆಗಳನ್ನು ಮರೆತು ಒಂದಾಗಿದ್ದೇವೆ. ಕ್ಷಮಿಸುವುದರಿಂದ ಪ್ರೀತಿ ಗಳಿಸಲು ಸಾಧ್ಯವಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಹೇಳಿದರು.

ತಪ್ಪು ಮಾಡುವುದು ಮನುಷ್ಯನ ಸಹಜ ಗುಣ. ಯಾವದೋ ತಪ್ಪು ಕಲ್ಪನೆಯಿಂದ ಮಾತನಾಡಿದ್ದಾರೆ. ಇದೀಗ ಕಾಶಪ್ಪನವರ ಅವರಿಗೆ ಅರಿವು ಆಗಿದೆ. ಕ್ಷಮೆ ಕೇಳಿದ ಮೇಲೆ ಅದನ್ನು ಬೆಳೆಸುವುರಲ್ಲಿ ಅರ್ಥವಿಲ್ಲ. ತಪ್ಪುಗಳು ಪುನರಾವರ್ತನೆ ಆಗಬಾರದು. ವೈರತ್ವದಿಂದ ಏನನ್ನೂ ಸಾಧಿಸಲು ಆಗುವುದಿಲ್ಲ. ಪ್ರೀತಿ, ಬಾಂಧವ್ಯ ಉಳಿಯಬೇಕು. ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ ಪರ ಪ್ರಚಾರ ಆರಂಭಿಸಿದ್ದೇವೆ. 15 ವರ್ಷಗಳ ಸೋಲಿನ ಸರಪಳಿಯಿಂದ ಈ ಬಾರಿ ಹೊರಬರುವ ವಿಶ್ವಾಸವಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೋದಿಯದು ಆಕರ್ಷಕ ರಾಜಕೀಯ
2014ರ ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಮುನ್ನ ಪ್ರಧಾನಿ ನರೇಂದ್ರ ಮೋದಿ ನೂರಾರು ಭರವಸೆ ನೀಡಿದ್ದರು. ಚೌಕಿದಾರ್ ಎಂದು ಹೇಳಿಕೊಂಡಿದ್ದರು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ., ರೈತರ ಸಾಲಮನ್ನಾ ಸೇರಿ ನಾನಾ ರೀತಿಯ ಭರವಸೆ ನೀಡಿದ್ದರು. ಆದರೆ, ಅಧಿಕಾರಕ್ಕೆ ಬಂದಬಳಿಕ ಬಡವರು, ರೈತರಿಗಾಗಿ ಅನಕೂಲಕರ ಯೋಜನೆ ಜಾರಿ ಮಾಡಲಿಲ್ಲ. ವಿಜಯ ಮಲ್ಯ 8500 ಕೋಟಿ ರೂ., ನೀರವ ಮೋದಿ 4 ಸಾವಿರ ಕೋಟಿ ರೂ. ಸೇರಿ ಅನೇಕ ಶ್ರೀಮಂತರು ಹಣ ದೋಚಿಕೊಂಡು ಹೋದರು. ಚೌಕಿದಾರ್ ಮೋದಿ ಸುಮ್ಮನೆ ಕುಳಿತುಕೊಂಡಿದ್ದರು ಎಂದು ಲೇವಡಿ ಮಾಡಿದ ನಂಜಯ್ಯನಮಠ, ರೆಲ್ ವಿಮಾನ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ವೀಣಾ ಒಳ್ಳೆಯ ಆಡಳಿತಗಾರ್ತಿ
ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಮೊದಲ ಬಾರಿಗೆ ಮಹಿಳೆಗೆ ಟಿಕೆಟ್ ನೀಡಲಾಗಿದೆ. ವೀಣಾ ಕಾಶಪ್ಪನವರ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿದ್ದಾಗ ಒಳ್ಳೆಯ ಆಡಳಿತಗಾರ್ತಿ ಎಂದು ಸಾಬೀತುಪಡಿಸಿದ್ದಾರೆ. ಸಂಸತ್‌ನಲ್ಲಿ ನಮ್ಮ ಕ್ಷೇತ್ರ ಪ್ರತಿನಿಧಿಸಿದರೆ ಈ ಭಾಗದ ಸಮಸ್ಯೆಗಳ ಬಗ್ಗೆ ಪ್ರಮಾಣಿಕವಾಗಿ ಧ್ವನಿ ಎತ್ತಲಿದ್ದಾರೆ. ಮತದಾರರು ಒಂದು ಅವಕಾಶ ನೀಡಬೇಕು ಎಂದರು.

ಕಾಂಗ್ರೆಸ್ ಮುಖಂಡ ಮಂಜುನಾಥ ವಾಸ್ನದ ಮಾತನಾಡಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿಕೆಯ ಹಳೇ ವಿಡಿಯೋಗಳನ್ನು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದಾರೆ. ಒಂದು ಸಮಾಜವನ್ನು ಎತ್ತಿಕಟ್ಟುವ ಹುನ್ನಾರ ಇದರಲ್ಲಿ ಅಡಗಿದೆ. ಇದರ ವಿರುದ್ಧ ಸೈಬರ್ ಕ್ರೈಮ್‌ಗೆ ದೂರು ನೀಡಲಿದ್ದೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ಬಸವರಾಜ ಕುಬಕಡ್ಡಿ, ಮಂಜುನಾಥ ಪೋತಗೇರಿ, ನಿಸಾರ್ ಅಹ್ಮದ್ ಪಟ್ಟೆವಾಲೆ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

ಪಾಕಿಸ್ತಾನದ ಮೇಲೆ ಭಾರತೀಯ ಸೇನೆಯ ದಾಳಿಯನ್ನು ರಾಜಕೀಯಗೊಳಿಸಲಾಗುತ್ತಿದೆ. ದೇಶದ ಸೈನ್ಯವನ್ನು ಮೋದಿ ಸೈನ್ಯ ಎಂದು ಬಿಂಬಿಸಲಾಗುತ್ತಿದೆ. ಯುವ ಜನತೆ ದಿಕ್ಕು ತಪ್ಪಿಸುವ ಕಾರ್ಯ ನಡೆದಿದೆ. ಯಾವ ಕಾರಣಕ್ಕೂ ಮತದಾರರು ಇಂತಹ ಕೆಟ್ಟ ಪ್ರವೃತ್ತಿಗೆ ಮರಳಾಗಬಾರದು.
– ಆನಂದ ಜಿಗಜಿನ್ನಿ ಕಾಂಗ್ರೆಸ್ ವಕ್ತಾರ

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...