More

    50 ಹಾಸಿಗೆ ಆಸ್ಪತ್ರೆಗೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಭೇಟಿ

    ಬಾಗಲಕೋಟೆ: ನಗರದ 50 ಹಾಸಿಗೆಗಳ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಾಯಕ್ಕ ಮೇಟಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿರುವ ಹೆರಿಗೆ ವಿಭಾಗದಲ್ಲಿರುವ ಬಾಣಂತಿಯರ ಯೋಗಕ್ಷೇಮ ವಿಚಾರಿಸಿದರು. ಸರಿಯಾಗಿ ಚಿಕಿತ್ಸೆ ಸಿಗುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ಕೋವಿಡ್ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡ ಬಗ್ಗೆ ಅವಲೋಕನ ನಡೆಸಿದರು. ಪ್ರತಿ ತಿಂಗಳು ಆಗುತ್ತಿರುವ ಹೆರಿಗೆ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ ಉಪಸ್ಥಿತರಿದ್ದರು.

    
    
    Community-verified icon
    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts