More

    ಫೆ.27 ರಂದು ಮಾದಿಗರ ಸಮಾವೇಶ

    ಬಾಗಲಕೋಟೆ: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಮಾದಿಗರ ಸಂಘದ ನೇತೃತ್ವದಲ್ಲಿ ಫೆ.27 ರಂದು ಮುಧೋಳದಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಹೊಸಮನಿ ಹೇಳಿದರು.

    ಮುಧೋಳದ ರನ್ನ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ರಾಜ್ಯದ ವಿವಿಧ ಭಾಗದಿಂದ 3 ಲಕ್ಷಕ್ಕೂ ಹೆಚ್ಚು ಸಮಾಜ ಬಾಂಧವರು ಭಾಗವಹಿಸಲಿದ್ದಾರೆ. ಒಳ ಮೀಸಲಾತಿ ವರ್ಗೀಕರಣ ಜಾರಿಗಾಗಿ ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿ ಅನೇಕ ವರ್ಷಗಳು ಗತಿಸಿದವು. ಯಾವ ಸರ್ಕಾರವೂ ಅನುಷ್ಠಾನಗೊಳಿಸಿಲ್ಲ. ಇದೀಗ ಸಮಾವೇಶ ಮೂಲಕ ಸರ್ಕಾರಕ್ಕೆ ಮತ್ತೊಮ್ಮೆ ಒತ್ತಾಯ ಮಾಡಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಮಾದಿಗ ಸಮಾಜದ ಮಾದರ ಚನ್ನಯ್ಯ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ, ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಹಾಲಿ, ಮಾಜಿ ಶಾಸಕರಿಗೆ ಆಹ್ವಾನ ನೀಡಲಾಗಿದೆ. ಮಾದಿಗ ಸಮಾಜಕ್ಕೆ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಹೋರಾಟ ನಡೆಸುತ್ತಿರುವ ಎಲ್ಲ ಸಂಘಟನೆಗಳು ಸಮಾವೇಶದ ಯಶಸ್ವಿಗೆ ಸಹಕಾರ ನೀಡಲಿವೆ ಎಂದರು.

    ಅಲ್ಲದೆ,ಜಿ.ಪಂ. ಸದಸ್ಯರು, ತಾ.ಪಂ.ಸದಸ್ಯರು, ಬುದ್ಧಿ ಜೀವಿಗಳು, ವಕೀಲರು, ಸಾಹಿತಿಗಳು, ಹಿರಿಯರು, ಯುವಕರು ಭಾಗವಹಿಸಿ ಸಮಾವೇಶದಲ್ಲಿ ಒಳ ಮೀಸಲಾತಿ ಕುರಿತು ಚಿಂತನೆ ನಡೆಸಲಿದ್ದಾರೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸರ್ಕಾರದ ಮೇಲೆ ಒತ್ತಡ ಹಾಕಲಿದ್ದಾರೆ ಎಂದು ತಿಳಿಸಿದರು.

    ಸಂಘದ ರಾಜ್ಯಾಧ್ಯಕ್ಷ ಶಂಕರ ಪೂಜಾರಿ, ಮುಖಂಡರಾದ ಮಾರುತಿ ಗಸ್ತಿ, ಅಶೋಕ ಮೇತ್ರಿ, ವೈ.ಡಿ.ಮಾದಾರ, ಮಹಾದೇವ ಮೇತ್ರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts