More

    ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ

    ಬಾಗಲಕೋಟೆ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

    ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರ ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೋವಿಡ್ ಸೋಂಕು ಹರಡಿದ ಬಳಿಕ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯ ಸರ್ಕಾರ ಇದುವರೆಗೂ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿಲ್ಲ. ಇದರಿಂದ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗಿದ್ದಾರೆ. ವಸತಿ ನಿಲಯ ತೆರೆಯದ ಪರಿಣಾಮ ಬಡ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

    ಇನ್ನು ಬಸ್ ಸೌಲಭ್ಯ ಒದಗಿಸಲಾಗಿದೆ. ಆದರೂ ಹೆಚ್ಚಿನ ದರ ನಿಗದಿ ಮಾಡಿದ್ದು ಖಂಡನೀಯ. ರಾಜ್ಯದ ಅನೇಕ ಕಾಲೇಜುಗಳಲ್ಲಿ ಉಪನ್ಯಾಸಕರು ಇರದ ಕಾರಣ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಕೂಡಲೇ ಸರ್ಕಾರ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕ್ರಮ ತೆಗೆದುಕೊಳ್ಳಬೇಕು. ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ಶಿಕ್ಷಣ ವ್ಯವಸ್ಥೆ ಮತ್ತೆ ಸರಿದಾರಿಗೆ ತರಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು. ಎಬಿವಿಪಿ ತಾಲೂಕು ಸಂಚಾಲಕ ಪ್ರಕಾಶ ಚವ್ಹಾಣ್, ಮುಖಂಡರಾದ ಉನ್ನತ ಬೇವಿನಕಟ್ಟಿ, ಭೀಮು ಕಂಬಳಿ, ಮುತ್ತು ಬಿ, ಬಸವರಾಜ ಭೀಮನ್ನವರ ಇತರರು ಇದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts