25.3 C
Bangalore
Friday, December 13, 2019

ನಡುಗಡ್ಡೆ ನಿವಾಸಿಗಳನ್ನು ಸ್ಥಳಾಂತರ ಮಾಡಿ

Latest News

ಸಾಲಿಗ್ರಾಮದಲ್ಲಿ ಕೋಮು ಗಲಾಟೆ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್​ ಸಹೋದರನ ವಿರುದ್ಧ ಎಫ್​ಐಆರ್​

ಮೈಸೂರು: ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದಲ್ಲಿ ನಡೆದ ಕೋಮು ಗಲಾಟೆ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್​ ಅವರ ಸಹೋದರ ಸಾ.ರಾ.ರಘು ಅವರ ಮೇಲೆ ಎಫ್​ಐಆರ್​...

ಪೌರತ್ವ ತಿದ್ದುಪಡಿ ಮಸೂದೆ ಸಿಂಧುತ್ವ ಪ್ರಶ್ನಿಸಿ ತ್ವರಿತ ವಿಚಾರಣೆಗೆ ಅರ್ಜಿ ಸಲ್ಲಿಸಿದ್ದ ಟಿಎಂಸಿ ಸಂಸದೆಗೆ ಸುಪ್ರೀಂಕೋರ್ಟ್​ನಲ್ಲಿ ಹಿನ್ನೆಡೆ!

ನವದೆಹಲಿ: ಕೇಂದ್ರ ಸರ್ಕಾರ ಗುರುವಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಮಸೂದೆಯ ಸಿಂಧುತ್ವವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್​ ಪಕ್ಷದ ಸಂಸದೆ ಮೋಹುವಾ ಮೊಯಿತ್ರಾ...

ಜೀತ ವಿಮುಕ್ತರಿಗೆ ಬಂಧಮುಕ್ತ ಪ್ರಮಾಣಪತ್ರ ವಿತರಿಸಿದ ಎಸಿ ನವೀನ್ ಭಟ್

ಹೊಳೆನರಸೀಪುರ: ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ಸಂಜೆ ಜೀತ ಮುಕ್ತ ಗೊಳಿಸಿದ 6 ಜನರಿಗೆ ಬಂಧಮುಕ್ತ ಪ್ರಮಾಣ ಪತ್ರವನ್ನು ಉಪ ವಿಭಾಗಾಧಿಕಾರಿ ನವೀನ್ ಭಟ್ ವಿತರಿಸಿದರು. ನಂತರ...

ಹಾಸನದವರಷ್ಟು ಬುದ್ಧಿ ನನಗೆ ಕೊಡಪ್ಪ ಅಂತ ದೇವರಲ್ಲಿ ಕೇಳುತ್ತೇನೆ ಅಂದ್ರು ಸಚಿವ ಜೆ.ಸಿ.ಮಾಧುಸ್ವಾಮಿ

ಚನ್ನರಾಯಪಟ್ಟಣ: ತಾಲೂಕಿನ ಏತನೀರಾವರಿ ಯೋಜನೆಯಲ್ಲಿ ಜಮೀನು ಕಳೆದುಕೊಂಡಿರುವವರ ಪರಿಹಾರಕ್ಕೆ ಸುಮಾರು 200 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹೇಳಿದರು. ತಾಲೂಕಿನ...

ಪತ್ನಿಗೆ ಈರುಳ್ಳಿ ಕಿವಿಯೋಲೆ ತಂದುಕೊಟ್ಟ ಪ್ರಖ್ಯಾತ ನಟನ್ಯಾರು: ಕಾಮಿಡಿಯಾದ್ರೂ ಇದರಲ್ಲಿದೆ ಮನಮುಟ್ಟುವ ಸಂದೇಶ!

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಪತ್ನಿ ಟ್ವಿಂಕಲ್​ ಖನ್ನಾ ದೇಶದಲ್ಲಿ ಏನೇ ಬೆಳವಣಿಗೆಯಾದರೂ ಜಾಲತಾಣದಲ್ಲಿ ಪ್ರತಿಕ್ರಿಯೆ...

ಬಾಗಲಕೋಟೆ : ಆಲಮಟ್ಟಿ ಜಲಾಶಯ 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಿದಾಗ ನಡುಗಡ್ಡೆಯಾಗುವ ನಗರದ ಪ್ರದೇಶದ 855 ಕಟ್ಟಡಗಳನ್ನು ಮುಳುಗಡೆ ಎಂದು ಪರಿಗಣಿಸಿ ಕೂಡಲೇ ಸ್ಥಳಾಂತರಿಸಬೇಕು ಎಂದು ನಗರದ ಮುಖಂಡರು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಶಂಕರ ಅವರಿಗೆ ಮನವಿ ಸಲ್ಲಿಸಿದರು.

ಗುರುವಾರ ನಗರದ ಹೊಸ ಪ್ರವಾಸಿ ಮಂದಿರದಲ್ಲಿ ವಿ.ಶಂಕರ ಅವರನ್ನು ಭೇಟಿ ಮಾಡಿದ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ-ಉತ್ತರ ಕರ್ನಾಟಕ ಹೋರಾಟ ಸಮಿತಿ ಮುಖಂಡ ಎ.ಎ. ದಂಡಿಯಾ, ಬಿಟಿಡಿಎ ಮಾಜಿ ಸದಸ್ಯ ಜಿ.ಎಂ. ಟಂಕಸಾಲಿ, ಪ್ರಮುಖರಾದ ಸುರೇಂದ್ರ ಸಂಗಮ, ಇಸಾಕ್ ದಂಡಿಯಾ ಇತರರು ಸ್ಥಳಾಂತರಕ್ಕೆ ಹಿಂದೆ ಸರ್ಕಾರ ಕ್ರಮ ಕೈಗೊಂಡಿತ್ತು. ಸದ್ಯ ಕೈ ಬಿಡಲಾಗಿದೆ. ಮತ್ತೆ ಪ್ರಕ್ರಿಯೆ ಆರಂಭಿಸಿ ಶೀಘ್ರ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿದರು.

ಜಲಾಶಯ 524.256 ಮೀಟರ್‌ಗೆ ಎತ್ತರಿಸುವುದರಿಂದ ನಗರದ ವಾರ್ಡ್ ನಂ. 1, 2, 3, 6, 7 ಹಾಗೂ 9ರ ವ್ಯಾಪ್ತಿಯ ಸುಮಾರು 855 ಕಟ್ಟಡಗಳು ನಡುಗಡ್ಡೆಯಾಗಲಿವೆ. ಈ ಪ್ರದೇಶ ಮುಳುಗಡೆ ವ್ಯಾಪ್ತಿಗೆ ಬರುವುದಿಲ್ಲ. ನೀರು ಸುತ್ತಲೂ ಆವರಿಸುವುದರಿಂದ ನಗರ ಸಂಪರ್ಕ ಕಡಿತಗೊಳ್ಳಲಿದೆ. ಹೀಗಾಗಿ ನಡುಗಡ್ಡೆ ಪ್ರದೇಶವನ್ನು ಮುಳುಗಡೆ ಪ್ರದೇಶ ಎಂದು ಘೋಷಣೆ ಮಾಡಲು ಸರ್ಕಾರ ಸಮೀಕ್ಷೆ ಕಾರ್ಯ ನಡೆಸಿ ಭೂ ಸ್ವಾಧೀನಕ್ಕೆ ಅಣಿಯಾಗಿತ್ತು. ಇದೀಗ ಎಲ್ಲ ಪ್ರಕ್ರಿಯೆ ಸಂಪೂರ್ಣ ನಿಲ್ಲಿಸಲಾಗಿದೆ. ಇದರಿಂದ ಆತಂಕ ಸೃಷ್ಟಿಯಾಗಿದೆ. ಈ ಕುರಿತು 855 ಮನೆಗಳ ಮಾಲೀಕರು, ಬಿಟಿಡಿಎಗೆ ಅಗತ್ಯ ದಾಖಲೆ ಸಲ್ಲಿಸಿದ್ದಾರೆ. ಆದರೂ, ಬಿಟಿಡಿಎ ಮುಂದಿನ ಕ್ರಮ ಕೈಗೊಳ್ಳದೆ ನಿರ್ಲಕ್ಷೃ ವಹಿಸಿದೆ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಕೆಬಿಜೆಎನ್‌ಎಲ್ ಎಂಡಿ ವಿ. ಶಂಕರ, ನಡುಗಡ್ಡೆಯಾಗುವ ಪ್ರದೇಶ ಹಾಗೂ ಇಲ್ಲಿನ ಮುಳುಗಡೆ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಲಾಗುವುದು. ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಬಿಟಿಡಿಎ ಮುಖ್ಯ ಎಂಜಿನಿಯರ್ ಅಶೋಕ ವಾಸನದ, ಎಇಇ ಮೋಹನ ಹಲಗತ್ತಿ ಇತರರು ಇದ್ದರು.





Stay connected

278,747FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...