More

    ಬ್ಲಾಕಿಂಗ್ ದಂಧೆ ವಿರುದ್ಧ ಕ್ರಮ ಕೈಗೊಳ್ಳಿ

    ಬಾಗಲಕೋಟೆ: ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಬಸವೇಶ್ವರ ವೃತ್ತದಲ್ಲಿ ಮಂಗಳವಆರ ಪ್ರತಿಭಟನೆ ನಡೆಸಿದರು.

    ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಡಳಿತ ಭವನಕ್ಕೆ ತೆರಳಿದಿ ತಹಸೀಲ್ದಾರ ಎಸ್.ಜಿ.ನಾಯಕಲ್ಮಠ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಕಾರಣಕ್ಕೆ ಸಿಇಟಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಗ್ಗೆ ಕೂಡಾ ಎಬಿವಿಪಿ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗಿತ್ತು. ಈಗ ರಾಜ್ಯದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆಯನ್ನು ಸಾಕ್ಷಿ ಸಮೇತವಾಗಿ ಐಟಿ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ಸೀಟುಗಳ ಮಾರಾಟದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಜೊತೆಗೆ ಆದಾಯ ತೆರಿಗೆ ನಿಯಮಗಳು ಉಲ್ಲಂಘನೆಯಾಗಿವೆ. ಕೂಡಲೇ ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

    ಎಬಿವಿಪಿ ನಗರ ಕಾರ್ಯದರ್ಶಿ ಉನ್ನತ್ ಬೇವಿನಕಟ್ಟಿ, ಮುಖಂಡರಾದ ಪಣವೀರ ರಾಘವೇಂದ್ರ ದೇಸಾಯಿ, ಪ್ರಕಾಶ ಚವ್ಹಾಣ, ರುದ್ರೇಶ ನಾಶಿ, ಅಯವಧನ ದೇಸಾಯಿ, ತೇಜಸಗೌಡ ಡಿ., ಪೂಜಾ ಅಂಗಡಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.



    ಬ್ಲಾಕಿಂಗ್ ದಂಧೆ ವಿರುದ್ಧ ಕ್ರಮ ಕೈಗೊಳ್ಳಿ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts