More

    ನಿವೇಶನ ಮಾರಾಟಕ್ಕೆ ಅವಕಾಶ ನೀಡಿ

    ಬಾಗಲಕೋಟೆ: ಆಶ್ರಯ ಮನೆ ಯೋಜನೆ ಅಡಿಯಲ್ಲಿ ಮನೆಗಳನ್ನು ನಿರ್ಮಿಸಲು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದಿಂದ ನಗರಸಭೆಗೆ 15 ಎಕರೇ ಭೂಮಿ ಹಸ್ತಾಂತರ ಮಾಡಲಾಗಿದೆ. ಮನೆಗಳ ನಿರ್ಮಾಣಕ್ಕೆ ರೂಪಿಸಿದ ವಿನ್ಯಾಸಕ್ಕೆ ಅನುಮೋದನೆ ನೀಡಲು ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯಿಸಲಾಯಿತು.

    ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಆಶ್ರಯ ವಿನ್ಯಾಸಕ್ಕೆ ಒಪ್ಪಿಗೆ ನೀಡಲು ಸಭೆಯಲ್ಲಿ ಸೂಚಿಸಲಾಯಿತು. ಅಲ್ಲದೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು. ಖಾಸಗಿ ಲೇ ಔಟಗಳ ವಿನ್ಯಾಸಗಳ ಅಭಿವೃದ್ಧಿಗೆ ಅನುಮೋದನೆ ಸಭೆಯಲ್ಲಿ ನೀಡಲಾಯಿತು.

    ಜಿಲ್ಲಾಧಿಕಾರಿ ಕೆ.ರಾಜೇಂದ್ರ ಮಾತನಾಡಿ, ಅನಧಿಕೃತ ಬಡಾವಣೆಗಳಲ್ಲಿನ ನಿವೇಶನಗಳಿಗೆ ಗ್ರಾಮ ಪಂಚಾಯಿತಿಗಳಲ್ಲಿ ಖಾತೆ ತೆರೆದಿದ್ದು, ನಗರಾಭಿವೃದ್ಧಿ ಪ್ರಾಧಿಕಾರದಿಂದ ವಿನ್ಯಾಸ ಅನುಮೋದನೆ ಆಗಿರುವ ಬಗ್ಗೆ ಖಚಿತ ಪಡಿಸಿಕೊಂಡು ನಿವೇಶನಗಳನ್ನು ನೋಂದಣಿ ಮಾಡಲು ಅವಕಾಶ ನೀಡಬೇಕು ಎಂದು ಉಪನೋಂದಣಾಧಿಕಾರಿಗಳಿಗೆ ಸೂಚನೆ ನೀಡಿದರು.

    ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಲೇ ಔಟಗಳಲ್ಲಿ ರಸ್ತೆ, ಒಳಚರಂಡಿ, ಚರಂಡಿ, ವಿದ್ಯುತ್ ಸಂಪರ್ಕ, ನೀರು ಸರಬರಾಜು, ಉದ್ಯಾನವನ ಸೇರಿದಂತೆ ನಿಯಮಾನುಸಾರ ಸಂಪೂರ್ಣವಾಗಿ ಅಭಿವೃದ್ಧಿಪಡಿಸಿದ ನಂತರವೇ ನಿವೇಶನಗಳ ಮಾರಾಟಕ್ಕೆ ಒಪ್ಪಿಗೆ ನೀಡಬೇಕು ಎಂದು ಶಾಸಕ ವೀರಣ್ಣ ಚರಂತಿಮಠ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಬುಡಾ ಆಯುಕ್ತ ಗಣಪತಿ ಪಾಟೀಲ, ನಗರ ಯೋಜನಾ ಸಹಾಯಕ ನಿರ್ದೇಶಕಿ ಆರ್.ಡಿ. ಮನವಳ್ಳಿ, ನಗರ ಸಭೆ ಆಯುಕ್ತ ವಿ.ಮುನಿಶಾಮಪ್ಪ, ಬುಡಾ ಸದಸ್ಯರಾದ ರಾಜು ನಾಯ್ಕರ, ಚಂದ್ರಪ್ರಕಾಶ ಚೌದ್ರಿ, ಗುಂಡು ಶಿಂಧೆ, ಸವಿತಾ ಲೆಂಕೆನ್ನವರ ಅಧಿಕಾರಿಗಳು ಉಪಸ್ಥಿತರಿದರು.



    ನಿವೇಶನ ಮಾರಾಟಕ್ಕೆ ಅವಕಾಶ ನೀಡಿ



    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts