More

    ನಿರ್ಲಕ್ಷ್ಯ ಧೋರಣೆ ಸರಿಯಲ್ಲ

    ಬಾಗಲಕೋಟೆ: ನಗರದ ಬಿ.ವಿ.ವಿ. ಸಂಘದ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ಕೋವಿಡ್ ಲಸಿಕೆ ಕೇಂದ್ರದಲ್ಲಿ ಶುಕ್ರವಾರ ಸಂಘದ ಕಾರ್ಯಾಧ್ಯಕ್ಷ, ಶಾಸಕ ಡಾ.ವೀರಣ್ಣ ಚರಂತಿಮಠ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದರು.

    ಈ ವೇಳೆ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ಮೊದಲಿಗಿಂತಲೂ ವೇಗವಾಗಿ ಹರಡುತ್ತಿದೆ. ಸಾರ್ವಜನಿಕರು ನಿರ್ಲಕ್ಷಿಸಬಾರದು. ಸರ್ಕಾರ ಸೂಚಿಸುವ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಪರಸ್ಪರ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಮತ್ತು ಲಸಿಕೆ ಹಾಕಿಸಿಕೊಳ್ಳುವುದರ ಮೂಲಕ ಕೋವಿಡ್ ರೋಗ ಹರಡದಂತೆ ತಡೆಗಟ್ಟಲು ಸಾಧ್ಯವಿದೆ ಎಂದರು.

    ಸಾರ್ವಜನಿಕರು ಈ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದರ ಮೂಲಕ ಸರ್ಕಾರ ಮಾಡುತ್ತಿರುವ ಪ್ರಯತ್ನಗಳಿಗೆ ಸಹಕರಿಸಬೇಕು. ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಎಲ್ಲರೂ ಲಸಿಕೆ ಹಾಕಿಸಿಕೊಂಡು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

    ಬಿವಿವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ಪ್ರಾಚಾರ್ಯ ಡಾ.ಅಶೋಕ ಮಲ್ಲಾಪುರ, ಡಾ.ಭುವನೇಶ್ವರಿ ಯಳಮಲಿ, ಡಾ.ಅಶೋಕ ಡೋರ್ಲೆ, ಡಾ.ನವೀನ ಚರಂತಿಮಠ ಉಪಸ್ಥಿತರಿದ್ದರು.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts