ಮೂಲ ಸೌಕರ್ಯಕ್ಕಾಗಿ 51 ಕೋಟಿ ರೂ. ಕೊಡಿ

ಬಾಗಲಕೋಟೆ: ಮೂಲ ಸೌಕರ್ಯಕ್ಕಾಗಿ 51 ಕೋಟಿ ರೂ. ಕೊಡಿ ಬಾದಾಮಿ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಅಡಿಯಲ್ಲಿ ಪ್ರಸಕ್ತ ಬಜೆಟ್‌ನಲ್ಲಿ ಒಟ್ಟು 1815 ಕೋಟಿ ರೂ. ಅನುದಾನ ಒದಗಿಸುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರಗಳನ್ನು ಬರೆದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಇದೀಗ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಅವರಿಗೆ ಪ್ರತ್ಯೇಕ ಪತ್ರ ಬರೆದು 51 ಕೋಟಿ ರೂ. ಅನುದಾನ ಕೋರಿದ್ದಾರೆ.

2009ರಲ್ಲಿ ನೆರೆ ಸಂತ್ರಸ್ತರಿಗಾಗಿ ಬಾದಾಮಿ ಕ್ಷೇತ್ರದಲ್ಲಿ 34 ಗ್ರಾಮಗಳಲ್ಲಿ ನಿರ್ಮಾಣ ಮಾಡಿರುವ ಆಸರೆ ಕಾಲನಿಗಳ ಮೂಲ ಸೌಕರ್ಯಕ್ಕಾಗಿ 51 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುಡಿವ ನೀರು, ಚರಂಡಿ, ವಿದ್ಯುತ್ ಸೇರಿ ಮೂಲ ಸೌಲಭ್ಯ ಕಲ್ಪಿಸಲು ಪ್ರತಿ ಕಾಲನಿಗೆ ಒಂದೂವರೆ ಕೋಟಿ ರೂ.ನಂತೆ ಒಟ್ಟು 51 ಕೋಟಿ ರೂ. ಅನುದಾನ ಕೋರಿದ್ದಾರೆ.

ಬಜೆಟ್‌ನಲ್ಲಿ ಬಾದಾಮಿಗೆ 250 ಕೋಟಿ ರೂ. ಅನುದಾನ?
ಮಾರ್ಚ್ 5 ರಂದು ಮಂಡಿಸುವ ಬಜೆಟ್‌ನಲ್ಲಿ ಬಾದಾಮಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ಹೆಚ್ಚಿನ ಅನುದಾನ ಕೋರಿ ಈಗಾಗಲೇ 15ಕ್ಕೂ ಹೆಚ್ಚು ಪತ್ರಗಳನ್ನು ಬರೆದಿದ್ದರು.

ಬಾದಾಮಿ ಕ್ಷೇತ್ರದ ಪ್ರವಾಸಿ ತಾಣಗಳ ಅಭಿವೃದ್ಧಿ, ಏತ ನೀರಾವರಿ, ರಸ್ತೆ ಅಭಿವೃದ್ಧಿ, ಚೆಕ್ ಡ್ಯಾಂ ಹಾಗೂ ಕೆರೆಗಳನ್ನು ತುಂಬಿಸುವುದು ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ 1815 ಕೋಟಿ ರೂ. ಬೃಹತ್ ಅನುದಾನಕ್ಕೆ ಬೇಡಿಕೆ ಸಲ್ಲಿಸಿದ್ದರು. ವಿಧಾನಸಭೆ ವಿಪಕ್ಷ ನಾಯಕರು ಆಗಿರುವ ಸಿದ್ದರಾಮಯ್ಯ ಅವರ ಬಾದಾಮಿ ಕ್ಷೇತ್ರಕ್ಕೆ ಮುಂದಿನ ಬಜೆಟ್‌ನಲ್ಲಿ ಅಂದಾಜು 250 ಕೋಟಿ ರೂ. ಅನುದಾನ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹಿಂದಿನ ವರ್ಷ ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಬಾಗಲಕೋಟೆ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಉಳಿದ ಆರು ಕ್ಷೇತ್ರಗಳನ್ನು ಬದಿಗೊತ್ತಿ ಕೇವಲ ಬಾದಾಮಿ ಕ್ಷೇತ್ರಕ್ಕೆ ಮಾತ್ರ ಅನುದಾನ ಘೋಷಿಸಿದ್ದರು. ಆ ಪೈಕಿ ಇತ್ತೀಚಿಗೆ 250 ಕೋಟಿ ರೂ. ಅನುದಾನದ ಬಾದಾಮಿ, ಕೆರೂರ ಪಟ್ಟಣ ಹಾಗೂ 18 ಗ್ರಾಮಗಳಿಗೆ ಕುಡಿವ ನೀರಿನ ಯೋಜನೆಗೆ ಯಡಿಯೂರಪ್ಪ ಸರ್ಕಾರ ಅನುಮೋದನೆ ನೀಡಿದ್ದು, ಕಾಮಗಾರಿಗೆ ಡಿಸಿಎಂ ಗೋವಿಂದ ಕಾರಜೋಳ ಚಾಲನೆ ನೀಡಿದ್ದರು. ಇದೀಗ ಮುಂದಿನ ಬಜೆಟ್‌ನಲ್ಲಿ ಸಿದ್ದರಾಮಯ್ಯ ಅವರ ಬಾದಾಮಿ ಕ್ಷೇತ್ರಕ್ಕೆ ಮತ್ತೆ ಹೆಚ್ಚಿನ ಅನುದಾನ ಸಿಗಲಿದೆ ಎಂದು ಹೇಳಲಾಗುತ್ತಿದೆ.





Share This Article

A. P. J. Abdul Kalam ಅವರ ಈ ಟ್ರಿಕ್ಸ್​​ಗಳನ್ನು ವಿದ್ಯಾರ್ಥಿಗಳು ಓದುವಾಗ ಮಿಸ್​ ಮಾಡ್ದೆ ಅನುಸರಿಸಿ

ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿರುವ ಭಾರತದ ಮಹಾನ್ ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್…

ಹೊಳೆಯುವ ಮುತ್ತಿನಂತಹ ಹಲ್ಲುಗಳಿಗೆ ಈ ಟಿಪ್ಸ್ ಫಾಲೋ ಮಾಡಿ..! Home Remedies

ಬೆಂಗಳೂರು: ಪ್ರತಿಯೊಬ್ಬರೂ ತಮ್ಮ ಹಲ್ಲುಗಳು ಮುತ್ತಿನಂತೆ ಬಿಳಿ ಮತ್ತು ಹೊಳೆಯುವಂತೆ ಕಾಣಬೇಕೆಂದು ಬಯಸುತ್ತಾರೆ. ಏಕೆಂದರೆ.. ನಮ್ಮ…

ಮೊದಲು ತಲೆಗೆ ನೀರು ಹಾಕ್ತೀರಾ? ಸ್ನಾನ ಮಾಡುವ ಸರಿಯಾದ ವಿಧಾನ ಯಾವುದು? ಇಲ್ಲಿದೆ ಉಪಯುಕ್ತ ಮಾಹಿತಿ | Bathing

Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…