25.1 C
Bangalore
Friday, December 6, 2019

ವಿದೇಶಿ ಪ್ರಜೆಗೆ ಥಳಿತ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಬಾಗಲಕೋಟೆ: ಬಾದಾಮಿ ತಾಲೂಕಿನ ಕೊಂಕಣಕೊಪ್ಪ ಗ್ರಾಮದಲ್ಲಿ ಮಹಿಳೆಯರ ಜತೆ ಅನುಚಿತವಾಗಿ ವರ್ತಿಸಿದ ವಿದೇಶಿ ಪ್ರವಾಸಿಗ ವಿಲಿಯಂ ಕೈರನ್ ಜೇಮ್ಸ್ ಎಂಬಾತನಿಗೆ ಗ್ರಾಮಸ್ಥರು ಸೋಮವಾರ ರಾತ್ರಿ ಧರ್ಮದೇಟು ನೀಡಿದ್ದಾರೆ.

ಗಾಯಗೊಂಡಿರುವ ವಿಲಿಯಂಗೆ ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ಚೇತರಿಸಿಕೊಂಡಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಟ್ರೇಲಿಯಾ ದೇಶದ ಮೆಲ್ಬರ್ನ್‌ದ ವಿಲಿಯಂ ಸೋಮವಾರ ರಾತ್ರಿ ಬಾದಾಮಿಯಿಂದ ಬಾಗಲಕೋಟೆಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮಾರ್ಗ ಮಧ್ಯೆ ಕೊಂಕಣಕೊಪ್ಪದಲ್ಲಿ ಇಳಿದುಕೊಂಡು ಅಲ್ಲಿನ ಜನರ ಜತೆ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೆ, ಮಹಿಳೆಯರ ಜತೆಗೂ ಅಸಭ್ಯವಾಗಿ ವರ್ತಿಸಿದ್ದರಿಂದ ತಾಳ್ಮೆ ಕಳೆದುಕೊಂಡ ಜನರು ಆತನಿಗೆ ಧರ್ಮದೇಟು ನೀಡಿದ್ದಾರೆ. ವಿದೇಶಿ ಪ್ರಜೆ ಮೇಲೆ ಹಲ್ಲೆ ನಡೆಯುತ್ತಿದೆ ಎಂದು ತಿಳಿದ ತಕ್ಷಣ ಗ್ರಾಮಕ್ಕೆ ತೆರಳಿ ಆತನನ್ನು ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ, ತಡರಾತ್ರಿವರೆಗೂ ಆಸ್ಪತ್ರೆಯಲ್ಲಿ ಡಿವೈಎಸ್ಪಿ ನಂದರಡ್ಡಿ, ಬಾಗಲಕೋಟೆ ಸಿಪಿಐ ಪಟ್ಟಣಶೆಟ್ಟಿ ಸೇರಿ ಇಪ್ಪತ್ತಕ್ಕೂ ಹೆಚ್ಚು ಪೊಲೀಸರು ಠಿಕಾಣಿ ಹೂಡಿದ್ದರು.

ಬಸ್‌ನಿಂದ ಜಿಗಿಯಲು ಮುಂದಾಗಿದ್ದ?
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ವಿಲಿಯಂ ಜೇಮ್ಸ್ ಕೊಂಕಣಕೊಪ್ಪ ಗ್ರಾಮಕ್ಕೂ ಮೊದಲು ಹಲಕುರ್ಕಿ ಬಳಿ ಬಸ್‌ನಿಂದ ಕೆಳಗೆ ಜಿಗಿಯಲು ಯತ್ನಿಸಿದ್ದ. ಆ ವೇಳೆ ಪ್ರಯಾಣಿಕರು ತಡೆದು ಬೈದು ಕುಳ್ಳರಿಸಿದ್ದರು. ಬಳಿಕ ಕೊಂಕಣಕೊಪ್ಪ ಗ್ರಾಮದಲ್ಲಿ ಇಳಿದು ರಾತ್ರಿ ವೇಳೆ ಇಷ್ಟೆಲ್ಲ ರಾದ್ಧಾಂತ ಮಾಡಿಕೊಂಡಿದ್ದಾನೆ. ಆತ ಅತಿಯಾಗಿ ಮದ್ಯಸೇವನೆ ಮಾಡಿದ್ದಲ್ಲದೆ, ಮಾದಕ ವಸ್ತುಗಳನ್ನು ಸೇವಿಸಿದ್ದ ಎನ್ನಲಾಗಿದೆ. ವಿದೇಶಿ ಪ್ರಜೆ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಬಾದಾಮಿ ತಾಲೂಕಿನ ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದವರ ಪತ್ತೆಗಾಗಿ ಪೊಲೀಸರು ಜಾಲಬೀಸಿದ್ದಾರೆ.

ಸೆ.7ರಂದು ಭಾರತಕ್ಕೆ ಬಂದಿದ್ದ ವಿಲಿಯಂ
ಸೆಪ್ಟೆಂಬರ್ 7ರಿಂದ ಭಾರತ ಪ್ರವಾಸದಲ್ಲಿರುವ ವಿಲಿಯಂ ಕೈರನ್ ಜೇಮ್ಸ್‌ನನ್ನು ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲಿಯೂ ವಿಲಿಯಂ ಕೂಗಾಟ, ಹಾರಾಟ, ಚೀರಾಟ ಮಾಡುತ್ತಿದ್ದಾನೆ ಎನ್ನಲಾಗಿದೆ.

ಅಸಭ್ಯ ವರ್ತನೆಯಿಂದಾಗಿ ಆಸ್ಟ್ರೇಲಿಯಾದ ವಿಲಿಯಂ ಕೈರನ್ ಜೇಮ್ಸ್ ಎನ್ನುವವರ ಮೇಲೆ ಹಲ್ಲೆ ಮಾಡಲಾಗಿದೆ. ಆದರೆ, ದೈಹಿಕವಾಗಿ ಹಲ್ಲೆ ಮಾಡಿದ್ದು ತಪ್ಪು. ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.
– ಲೊಕೇಶ ಜಗಲಾಸರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಗಲಕೋಟೆ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...