ಮಂಗಳೂರಿನಲ್ಲಿ ಬಾಗಲಕೋಟೆ ಮೂಲದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

IMG-20211208-WA0005
Published on

ಮಂಗಳೂರು: ಬಾಗಲಕೋಟೆ ಮೂಲದ ಕುಟುಂಬವಿಡೀ ಆತ್ಮಹತ್ಯೆಗೆ ಶರಣಾಗಿದೆ.
ಮಂಗಳೂರಿನ ಮೋರ್ಗನ್ಸ್‌ಗೇಟ್‌ ನಿವಾಸಿಗಳಾದ ನಾಗೇಶ್‌ ಶಿರಗುಪ್ಪಿ(30), ವಿಜಯಲಕ್ಷ್ಮಿ(26), ಮಕ್ಕಳಾದ ಸಪ್ನ(8) ಹಾಗೂ ಸಮರ್ಥ್‌(4) ಮೃತರಾಗಿದ್ದಾರೆ.ನಾಗೇಶ್‌ ಮಂಗಳೂರಿನಲ್ಲಿ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು. ನಾಗೇಶ್‌ ಕೊರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರೆ. ಮನೆಯೊಳಗೆ ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿದ್ದು ಕುಟುಂಬದವರು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಂಶಯಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net