25.9 C
Bengaluru
Wednesday, January 22, 2020

ಭಗವದ್ಗೀತೆ ಜಗತ್ತಿನ ಎಲ್ಲ ಭಾಷೆಗೆ ಅನುವಾದ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಬಾಗಲಕೋಟೆ: ಗೀತಾಸಾರ ಜೀವನಕ್ಕೆ ಹತ್ತಿರವಾದ ಅಂಶಗಳನ್ನು ತಿಳಿಸುತ್ತದೆ. ಜಗತ್ತಿನ ಎಲ್ಲ ಭಾಷೆಗೆ ಭಗವದ್ಗೀತೆ ಅನುವಾದಗೊಂಡಿದೆ ಎಂದು ಪ್ರವಚನಕಾರ ವಿದ್ವಾನ ಬಿಂದು ಮಾಧವಾಚಾರ್ಯ ನಾಗಸಂಪಿಗೆ ಹೇಳಿದರು.

ಭಗವದ್ಗೀತಾ ಜಯಂತಿ ಅಂಗವಾಗಿ ನಗರದ ಬಿವಿವಿ ಸಂಘದ ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಈಚೆಗೆ ಬಸವೇಶ್ವರ ಸಂಸ್ಕೃತ ಪಾಠಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಹಾಗೂ ಪಾರಿತೋಷಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಗತ್ತಿನಾದ್ಯಂತ ಒಂದು ಪುಸ್ತಕದ ಜಯಂತಿಯನ್ನು ಆಚರಿಸಲಾಗುತ್ತದೆ. ಅದುವೇ ಭಗವದ್ಗೀತೆ. ಅರ್ಜುನ ಎಂದರೆ ಸತತ ಪರಿಶ್ರಮ ಭಕ್ತಿ, ಶ್ರದ್ಧೆ. ಕೃಷ್ಣ ಎಂದರೆ ಲ ಕೊಡುವುದು. ಗೀತೆ ಎಲ್ಲರನ್ನು ಕರ್ತವ್ಯ ಪರರನ್ನಾಗಿ ಮಾಡುತ್ತದೆ. ಗೀತೆಯ ಸಂದೇಶವನ್ನು ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿಕೊಟ್ಟರು ಎಂದರು.

ಬಿವಿವಿ ಸಂಘದ ಶಾಲಾ ಪದವಿ ಪೂರ್ವ ವಿಭಾಗದ ಸಲಹೆಗಾರ ಸಿದ್ದರಾಮ ಆರ್.ಮನಹಳ್ಳಿ ಮಾತನಾಡಿ, ಭಗವದ್ಗೀತೆ ಸಂಸ್ಕೃತಿ ಮತ್ತು ಸಂಸ್ಕೃತ ಪರಂಪರೆ ಪ್ರತೀಕವಾಗಿದೆ. ಗೀತೆಯನ್ನು ಸ್ಮರಿಸಿಕೊಳ್ಳುವುದರ ಮೂಲಕ ಕೃಷ್ಣ ಮತ್ತು ಅರ್ಜುನರ ಸಂವಾದವನ್ನು ಒಳಗೊಂಡಿದೆ. ಜಗತ್ತಿನ ಮಹಾನ್ ವ್ಯಕ್ತಿಗಳೂ ಕೂಡ ಗೀತೆಯ ಸಂದೇಶವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದರು.

ಪ್ರಾಚಾರ್ಯ ಟಿ.ಬಿ. ಕೋರಿಶೆಟ್ಟಿ, ಎಸ್.ಎಚ್. ವಟವಟಿ, ರೋಹಿಣಿ ಎನ್.ಜೋಶಿ ಉಪಸ್ಥಿತರಿದ್ದರು. ಪ್ರಿಯಾಂಕಾ ಕುಲಕರ್ಣಿ ಪ್ರಾರ್ಥಿಸಿದರು. ಶ್ರೀನಿವಾಸ ಫಡ್ನೀಸ್ ಸ್ವಾಗತಿಸಿ, ಪರಿಚಯಿಸಿದರು. ಪ್ರವೀಣ ಗುಮಾಸ್ತೆ ವಂದಿಸಿದರು. ಡಾ. ಶೈಲಜಾಸ್ವಾಮಿ ನಿರೂಪಿಸಿದರು.

ವಿಜೇತರಿಗೆ ಬಹುಮಾನ
ಕಂಠಪಾಠ ಸ್ಪರ್ಧೆಯಲ್ಲಿ ಬಾಗಲಕೋಟೆ ನಗರದ ವಲಯದಲ್ಲಿ ಶಶಾಂಕ ಜೋರಾಪುರ (ಪ್ರಥಮ), ನಿವೇದಿತಾರಾಣಿ ಹೊಸಮನಿ(ದ್ವಿತೀಯ), ಶ್ರೀಹರಿ ಗೊಟಗುನಕಿ (ತೃತೀಯ) ಹಾಗೂ ವಿದ್ಯಾಗಿರಿ ವಲಯದಲ್ಲಿ ಅನನ್ಯಾ ಜೋಶಿ (ಪ್ರಥಮ), ಪೃಥ್ವಿ ಕುಲಕರ್ಣಿ (ದ್ವಿತೀಯ), ಸಹನಾ ಪ್ಯಾಟಿಶೆಟ್ಟರ (ತೃತೀಯ), ಪದವಿ ಪೂರ್ವ ವಿಭಾಗದಲ್ಲಿ ಮೇಘಾ ಪಾಟೀಲ (ಪ್ರಥಮ), ಕಾವೇರಿ ಕುಲಕರ್ಣಿ ಮತ್ತು ಪ್ರಿಯಾಂಕಾ ಕುಲಕರ್ಣಿ (ದ್ವಿತೀಯ), ಪ್ರಶಾಂತ ಪೋರೆ ಹಾಗೂ ಅಭಿಷೇಕ ಬೋರನ್ನವರ ತೃತೀಯ ಸ್ಥಾನ ಪಡೆದಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಅಂದಾಜು 30 ವಿದ್ಯಾರ್ಥಿಗಳು ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...