More

    ಬಿಜೆಪಿಗರು ಬೊಬ್ಬೆ ಹೊಡೆಯುತ್ತಿದ್ದರು

    ಬಾಗಲಕೋಟೆ: ಬಿಜೆಪಿ ಪಕ್ಷದವರಿಗೆ ಆಡಳಿತ ನಡೆಸಲು ಮಾಡಲು ಬರುವುದಿಲ್ಲ. ಆದರೆ ವಿರೋಧ ಮಾಡುವುದು ಚೆನ್ನಾಗಿ ಗೊತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಪೆಟ್ರೋಲ್ ಬೆಲೆ ಕೇವಲ 1, 2 ರೂ. ಹೆಚ್ಚಳವಾದರೆ ಬಿಜೆಪಿಗರು ದೇಶದ ತುಂಬ ಬೊಬ್ಬೆ ಹೊಡೆಯುತ್ತಿದ್ದರು. ಈಗ ಅವರ ಆಡಳಿತ ಅವಧಿಯಲ್ಲಿ ಪೆಟ್ರೋಲ್ ಬೆಲೆ ಗಗನಕ್ಕೆ ಏರುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ರಾಮಲಿಂಗಾರೆಡ್ಡಿ ಹೇಳಿದರು.

    ನವನಗರದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭಾನುವಾರ ಭೇಟಿ ನೀಡಿ ಜಿಲ್ಲಾ ಘಟಕದಿಂದ ಸನ್ಮಾನ ಸ್ವೀಕರಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ಇನ್ನು ಕಾಂಗ್ರೆಸ್‌ನಲ್ಲಿ ಕೆಲ ನಾಯಕರು ನೇರಾನೇರ ಟೀಕೆಗಳನ್ನು ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ದೊಡ್ಡ ಪಕ್ಷವಾಗಿದೆ. ಸಣ್ಣಪುಟ್ಟ ಸಮಸ್ಯೆಗಳು ಇದ್ದೆ ಇರುತ್ತವೆ. ಯಾವ ಪಕ್ಷದಲ್ಲಿ ಇಂತಹ ಭಿನ್ನ ಅಭಿಪ್ರಾಯಗಳು ಇಲ್ಲ ಹೇಳಿ. ಕಾಂಗ್ರೆಸ್‌ನಲ್ಲಿ ಶೇ.99 ಯಾವುದೇ ರೀತಿಯ ಗೊಂದಲವಿಲ್ಲ. ಸಣ್ಣ-ಪುಟ್ಟ ಗೊಂದಲಗಳಿದ್ದು, ಅವುಗಳನ್ನು ಮಾತುಕತೆ ಮೂಲಕ ಬಗೆಹರಿಸಲಾಗುತ್ತದೆ ಎಂದರು.

    2018ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೋತಿರುವ 100 ಕ್ಷೇತ್ರಗಳನ್ನು ಗುರುತಿಸಲಾಗಿದೆ. ಮಾ.3 ರಿಂದ ಕೆಪಿಸಿಸಿ ಮುಖಂಡರು ರಾಜ್ಯ ಪ್ರವಾಸ ನಡೆಸಲಿದ್ದಾರೆ. ಸೋತಿರುವ ಕ್ಷೇತ್ರಗಳಲ್ಲಿ ಸಮಾವೇಶ, ಪಾದಯಾತ್ರೆ ನಡೆಯಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಎಸ್.ಆರ್.ಪಾಟೀಲ ಹೆಸರು ಮುಂಚೂಣಿಯಲ್ಲಿ ಇದ್ದರೂ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಶಾಸಕಾಂಗ ಸಭೆ ನಿರ್ಧಾರ ಮಾಡುತ್ತದೆ. ಜಾತಿ ಮೀಸಲಾತಿಗಳ ಬಗ್ಗೆ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಬಾಗಲಕೋಟೆ ರೆಡ್ಡಿ ಸಮಾಜದ ಮೀಸಲಾತಿಗಾಗಿ ಸಭೆ ನಡೆಸಲು ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

    ಮಾಜಿ ಸಚಿವ ಶಿವಶಂಕರ ರೆಡ್ಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಮಾಜಿ ಶಾಸಕರಾದ ಎಚ್.ವೈ.ಮೇಟಿ, ಜೆ.ಟಿ.ಪಾಟೀಲ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ, ಮುಖಂಡರಾದ ನಾಗರಾಜ ಹದ್ಲಿ, ಚನ್ನವೀರ ಅಂಗಡಿ, ಹಾಜಿಸಾಬ ದಂಡಿನ, ಮಂಜುನಾಥ ಪುರತಗೇರಿ ಸೇರಿದಂತೆ ಇತರರು ಇದ್ದರು.



    ಬಿಜೆಪಿಗರು ಬೊಬ್ಬೆ ಹೊಡೆಯುತ್ತಿದ್ದರು



    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts