ರಾಜ್ಯದಲ್ಲಿ 22 ಸ್ಥಾನ ಬಿಜೆಪಿ ಸ್ಥಾನ ಗೆಲ್ಲುತ್ತೆ

ಬಾಗಲಕೋಟೆ: ಬಾಗಲಕೋಟೆ ಸೇರಿದಂತೆ ರಾಜ್ಯದಲ್ಲಿ 22ಕ್ಕೂ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಮೂಲಕ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಪಟ್ಟ ಅಲಂಕರಿಸಲಿದ್ದಾರೆ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಡಿಸಿಎಂ, ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.

ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಪಟ್ಟಣದಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಲೋಕಸಭೆಯ ಚುನಾವಣೆ ವ್ಯಕ್ತಿಗತ ಚುನಾವಣೆಯಲ್ಲ. ಇದು ದೇಶದ ಚುನಾವಣೆಯಾಗಿದೆ. ದೇಶದ ಹಿತದೃಷ್ಟಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಅನಿವಾರ್ಯವಾಗಿದೆ ಎಂದರು.

ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ ಜಿಪಂ ಅಧ್ಯಕ್ಷರಾಗಿದ್ದ ವೇಳೆ ಆಡಳಿತ ನಡೆಸುವಲ್ಲಿ ವಿಫಲರಾಗಿದ್ದಾರೆ. ಪ್ರಚಾರಗೋಸ್ಕರ ಗ್ರಾಮ ವಾಸ್ಥವ್ಯ ಮಾಡಿದರು. ಜನ ಬಿಜೆಪಿ ಪರವಾಗಿ ಇದ್ದಾರೆ ಎನ್ನುವಕಾರಣಕ್ಕೆ ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ವಿ.ಪ ಮಾಜಿ ಸದಸ್ಯ ಜಿ.ಎಸ್ ನ್ಯಾಮಗೌಡ, ಉದ್ಯಮಿ ಜಗದೀಶ್ ಗುಡಗುಂಟಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಿವಾನಂದ ಪಾಟೀಲ, ಸಾಯವ್ವ ದಳವಾಯಿ, ಪಿ.ಟಿ ಉಪಾದ್ಯ, ಸುರೇಶಗೌಡ ಪಾಟೀಲ ಇತರರು ಇದ್ದರು.





Leave a Reply

Your email address will not be published. Required fields are marked *