More

    ಬಿಜೆಪಿ ಕಾರ್ಯಾಲಯದಲ್ಲಿ ಆಚರಣೆ

    ಬಾಗಲಕೋಟೆ: ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು ಸರ್ದಾರ ವಲ್ಲಭಭಾಯಿ ಪಟೇಲ್ ಜಯಂತಿ ಆಚರಿಸಲಾಯಿತು.

    ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಭಾರತೀಯ ಪರಂಪರೆಯ ಮೌಲ್ಯಗಳು, ಶ್ರೇಷ್ಠತೆ ಬಗ್ಗೆ ಆದಿಕವಿ ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮೂಲಕ ಜಗತ್ತಿಗೆ ತಿಳಿಸಿಕೊಟ್ಟಿದ್ದಾರೆ. ಈ ಗ್ರಂಥ ದೇಶದ ಜನತೆಗೆ ಮಾರ್ಗದರ್ಶಿಯಾಗಿದೆ. ವಾಲ್ಮೀಕಿ ಅವರ ಜೀವನದ ಮೌಲ್ಯಗಳನ್ನು ನಾವೆಲ್ಲ ಅಳವಡಿಸಿಕೊಳ್ಳಬೇಕು ಎಂದರು.

    ವಲ್ಲಭಭಾಯಿ ಪಟೇಲ್ ಅವರ ಕೊಡುಗೆ ಅತ್ಯಂತ ಅವಿಸ್ಮರಣೀಯವಾಗಿದೆ. ದೇಶದ ಏಕತೆಗಾಗಿ ಅವರ ಹೋರಾಟ ಇಂದಿಗೂ ಆದರ್ಶಪ್ರಿಯವಾಗಿದೆ ಎಂದರು.

    ಮಾಜಿ ಶಾಸಕ ಪಿ.ಎಚ್.ಪೂಜಾರ, ವಿ.ಪ. ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿದರು. ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ಎಪಿಎಂಸಿ ಅಧ್ಯಕ್ಷ ಕೃಷ್ಣಪ್ಪ ನಾಯಕ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಬಸವರಾಜ ಅವರಾದಿ, ಬಿಟಿಡಿಎ ಸದಸ್ಯ ಶಿವಾನಂದ ಟವಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯಕರ, ಮುಖಂಡರಾದ ರಂಗಪ್ಪ ನಾಯಕರ, ವೀರಣ್ಣ ಹಳೇಗೌಡರ, ಶಂಭುಗೌಡ ಪಾಟೀಲ, ಯಲ್ಲಪ್ಪ ಕ್ಯಾದಿಗೇರಿ, ಶಂಕರ ಗಲಗ, ಮಂಜುನಾಥ ಪಾಟೀಲ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ, ಕೇಶವ ಭಜಂತ್ರಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts