More

    ಬ್ಲಾೃಕ್ ಫಂಗಸ್ಗೆ ಬಾಗಲಕೋಟೆಯಲ್ಲಿ ಚಿಕಿತ್ಸೆ

    ಬಾಗಲಕೋಟೆ: ಜಿಲ್ಲೆಯಲ್ಲಿ ಬ್ಲಾೃಕ್ ಫಂಗಸ್ ಪ್ರಕರಣಗಳು ಕಂಡು ಬರುತ್ತಿವೆ. ಈವರೆಗೆ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕಳುಹಿಸಲಾಗುತ್ತಿತ್ತು. ಔಷಧ ಪೂರೈಕೆಯಾದ ತಕ್ಷಣದಿಂದ ಕೆಲವೇ ದಿನಗಳಲ್ಲಿ ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಯಲ್ಲಿ ಬ್ಲಾೃಕ್ ಫಂಗಸ್‌ಗೆ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ತಿಳಿಸಿದರು.

    ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಸೋಮವಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬ್ಲಾೃಕ್ ಂಗಸ್ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯನ್ನು ನೋಡಲ್ ಸೆಂಟರನ್ನಾಗಿ ಮಾಡಲಾಗಿತ್ತು. ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ತೊಂದರೆಯಾಗುತ್ತಿದೆ. ಇದನ್ನು ಮನಗಂಡು ಸಿಎಂ ಬಿ.ಎಸ್.ಯಡಿಯೂರಪ್ಪ ಆಯಾ ಜಿಲ್ಲೆಯಲ್ಲಿಯೇ ಚಿಕಿತ್ಸೆ ಪ್ರಾರಂಭಿಸಲು ತಿಳಿಸಿದ್ದಾರೆ. ಅಗತ್ಯವಾದ ಔಷಧ ಪೂರೈಕೆಯಾದ ನಂತರ ಚಿಕಿತ್ಸೆ ಪ್ರಾರಂಭಿಸಲಾಗುತ್ತಿದೆ ಎಂದರು.

    ಸ್ಕಾೃನಿಂಗ್ ಸೆಂಟರ್ ಪರಿಶೀಲಿಸಿ
    ಜಿಲ್ಲೆಯಲ್ಲಿ ಸಿಟಿ ಸ್ಕಾೃನಿಂಗ್‌ಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಅಗತ್ಯವಾಗಿದೆ. ಹೀಗಾಗಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು. ಹೆಚ್ಚಿನ ದರ ಪಡೆದದ್ದು ಕಂಡುಬಂದಲ್ಲಿ ಅಂತಹ ಸ್ಕಾೃನಿಂಗ್ ಸೆಂಟರ್‌ಗಳ ಅನುಮತಿಯನ್ನು ರದ್ದುಪಡಿಸಬೇಕು. ಭೇಟಿ ನೀಡಿ ಪರಿಶೀಲಿಸಿದ ಬಗ್ಗೆ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.

    ಕೋವಿಡ್ ಬಗ್ಗೆ ಗ್ರಾಮ ಮಟ್ಟದಲ್ಲಿ ಮನೆ ಮನೆ ಸರ್ವೆ ಕಾರ್ಯ ಚುರುಕುಗೊಳಿಸಬೇಕು. ಯಾವುದೇ ಕಾರಣಕ್ಕೆ ಕೋವಿಡ್ ಚಿಕಿತ್ಸೆಗೆ ಹೋಮ್ ಐಸೋಲೇಷನ್ ಅವಕಾಶ ಕೊಡಬಾರದು. ತೋಟದ ಮನೆ, ಪ್ರತ್ಯೇಕ ಗುಡಿಸಲು ಇದ್ದರೂ ಸಹ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಬೇಕು. ಗ್ರಾಮಗಳಲ್ಲಿರುವ ಸೋಂಕಿತರಿಂದ ಇತರರಿಗೆ ಹರಡದಂತೆ ಕ್ರಮವಹಿಸಬೇಕು ಎಂದ ಅವರು, ಗ್ರಾಮೀಣ ಭಾಗದಲ್ಲಿ ಕಂಡುಬಂದ ಸಕ್ರಿಯ ಪ್ರಕರಣಗಳ ಬಗ್ಗೆ ಉಪವಿಭಾಗಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

    ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಬರುತ್ತಿದ್ದು, ಈಗಾಗಲೇ ಮೊದಲನೇ ಡೋಸ್ ಪಡೆದವರಿಗೆ ಎರಡನೇ ಡೋಸ್‌ಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಅಲ್ಲದೆ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೂ ಸಹ ಲಸಿಕೆ ನೀಡಲಾಗುತ್ತಿದ್ದು, 18 ರಿಂದ 44 ವರ್ಷದೊಳಗಿನ ವಯೋಮಾನದವರಿಗೆ ಮುಂಚೂನಿಯಲ್ಲಿರುವ ಕಾರ್ಯಕರ್ತರಿಗೆ ಮಾತ್ರ ಮೊದಲ ಡೋಸ್ ನೀಡಲಾಗುತ್ತಿದೆ. ಆದರೆ ಸಾಮಾನ್ಯ ಜನರಿಗ ಲಸಿಕೆ ನೀಡುವದನ್ನು ಸರ್ಕಾರದ ಆದೇಶದನ್ವಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದರು.

    ಸಭೆಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ವಿಧಾನ ಪಡಿಷತ್ ಸದಸ್ಯ ಹನಮಂತ ನಿರಾಣಿ, ಜಿಲ್ಲಾ ಪಂಚಾಯಿತಿ ಸಿಇಒ ಟಿ.ಭೂಬಾಲನ, ಜಿ.ಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ , ತಹಸೀಲ್ದಾರ ಗುರುಸಿದ್ದಯ್ಯ ಹಿರೇಮಠ ಇತರರು ಉಪಸ್ಥಿತರಿದ್ದರು.

    ಪ್ರತಿದಿನ 2 ಸಾವಿರಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಕೋವಿಡ್ ಸ್ಯಾಂಪಲ್ ತೆಗೆಯಲಾಗುತ್ತಿದೆ ಡಿಎಚ್‌ಒ ಡಾ.ಅನಂತ ದೇಸಾಯಿ ಸಭೆ ತಿಳಿಸಿದರು. ಈ ವೇಳೆ ಶಾಸಕ ಸಿದ್ದು ಸವದಿ ಪ್ರತಿಕ್ರಿಯೆ ನೀಡಿ, ಸ್ಯಾಂಪಲ್ ತೆಗೆದ ತಕ್ಷಣ ಪರೀಕ್ಷೆಗೆ ಕಳುಹಿಸದೇ 5-6 ದಿನಗಳ ಕಾಲ ತಮ್ಮಲ್ಲಿಯೇ ಇಟ್ಟುಕೊಳ್ಳುತ್ತಿದ್ದಾರೆ. ಇದರಿಂದ ಪರೀಕ್ಷೆ ತಡವಾಗುತ್ತಿರುವದರಿಂದ ಸೋಂಕು ಹರಡಲು ಅವಕಾಶ ಕೊಟ್ಟಂತಾಗುತ್ತದೆ. ಈ ಬಗ್ಗೆ ಕ್ರಮವಹಿಸುವಂತೆ ಮನವಿ ಮಾಡಿದರು.

    ಕೋವಿಡ್ ರೋಗಿಗಳಿಗೆ ಸ್ಟಿರಾಯರ‌್ಡ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗಿ ನೀಡುತ್ತಿರುವುದರಿಂದ ಹಾಗೂ ಆಕ್ಸಿಜನ್ ನಳಿಕೆಯಲ್ಲಿ ಡಿಸಿಲರಿ ನೀರು ಬಳಸದ ಪರಿಣಾಮ ಬ್ಲಾೃಕ್ ಫಂಗಸ್ ಕಂಡು ಬರುತ್ತಿದೆ. ಈ ಬಗ್ಗೆ ಖಾಸಗಿ ಆಸ್ಪತ್ರೆಯ ವೈದ್ಯರ ಸಭೆ ನಡೆಸಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಈ ಸೋಂಕು ಹೊಸದಲ್ಲ.
    – ವೀರಣ್ಣ ಚರಂತಿಮಠ ಬಾಗಲಕೋಟೆ ಶಾಸಕ

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts