More

    ಶಿಕ್ಷದಿಂದ ಮಾತ್ರ ಸಮಗ್ರ ಅಭಿವೃದ್ಧಿ

    ಬಾಗಲಕೋಟೆ: ಶಿಕ್ಷಣದಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯವಿದೆ. ಬಿವಿವಿ ಸಂಘ ಈ ಭಾಗದಲ್ಲಿ ದೊಡ್ಡ ಕ್ರಾಂತಿ ಮಾಡಿದೆ. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ತಕ್ಷಣ ಉದ್ಯೋಗ ಕಲ್ಪಿಸುವ ಅಡ್ವಾನ್ಸ್ ಕೋರ್ಸ್ ನೀಡಬೇಕು. ಇದರಿಂದ ಮುಂಬರುವ ಹತ್ತು ವರ್ಷದಲ್ಲಿ ಭಾರತದಲ್ಲಿ ಪ್ರವಾಸೋದ್ಯಮ ಮತ್ತು ವೈದ್ಯಕೀಯ ಇಲಾಖೆಯಲ್ಲಿ ಒಂದು ಕೋಟಿ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯ ಎಂದು ಆಂಧ್ರಪ್ರದೇಶದ ಆದಿವಾಸಿ ಕೇಂದ್ರಿಯ ವಿಶ್ವವಿದ್ಯಾಲಯ ಕುಲಪತಿ ಪ್ರೊ.ತೇಜಸ್ವಿ ಕಟ್ಟೀಮನಿ ಹೇಳಿದರು
    ನಗರದ ಬಿವಿವಿ ಸಂಘದ ಹಳೇ ಮೈದಾನದಲ್ಲಿ ಶನಿವಾರ ಸಂಜೆ ಬಸವೇಶ್ವರ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯಗಳ ಅಮೃತ ಸುವರ್ಣ ಸಂಗಮದ ಸಮಾರೋಪ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿದರು.
    ನಿರುದ್ಯೋಗ ಸಮಸ್ಯೆ ನಿವಾರಣೆ ಉನ್ನತ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಅಡಾನ್ ಕೋರ್ಸ್ ಗಳಿಗೆ ಹೆಚ್ಚನ ಆದ್ಯತೆ ನೀಡಬೇಕಿದೆ. ಗುಣಮಟ್ಟ ಶಿಕ್ಷಣದ ಜೊತೆಗೆ ಉತ್ತಮ ದೇಶವನ್ನು ಕಟ್ಟುವ ಹೊಣೆ ಮಹಾವಿದ್ಯಾಲಗಳ ಮೇಲಿದೆ. ಅದನ್ನು ಸಮರ್ಪಕವಾಗಿ ನಿಭಾಯಿಸಬೇಕು. ಬಾಗಲಕೋಟೆಯಂತಹ ಪ್ರವಾಸಿ ತಾಣಕ್ಕೆ ಬರುವ ಪ್ರವಾಸಿಗರು ಮೂಲಭೂತ ಸೌಲಭ್ಯ ಅರಿಸಿ ಬೇರೆ ನಗರಗಳಿಗೆ ಹೋಗುವಂತ ಪರಿಸ್ಥಿತಿ ಇದ್ದು, ಅದನ್ನು ಬದಲಿಸಿ ಜಿಲ್ಲೆಯ ಅಭಿವೃದ್ಧಿ ಮಾಡುವಂತ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಆಶಿಸಿದರು.
    ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಕುಲಪತಿ ಎಂ. ರಾಮಚಂದ್ರಗೌಡ ಮಾತನಾಡಿ, ೧೯೦೬ರಲ್ಲಿ ಪ್ರಾರಂಭವಾದ ಬಿವಿವಿ ಸಂಘ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದು ಒಂದು ವಿಶ್ವವಿದ್ಯಾಲಯವಾಗುವ ಶಕ್ತಿ ಹೊಂದಿದೆ.ಖಾಸಗಿ ವಿವಿ ಅಥವಾ ಡೀಮ್ಡ ವಿವಿಯನ್ನು ಸ್ಥಾಪಿಸುವುದರ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ತಿರುವು ನೀಡುವ ಕೆಲಸ ಸಂಘ ಮಾಡಬೇಕು. ಹಲವಾರು ಕಾಲೇಜುಗಳು ಹೆಚ್ಚಿನ ಅಂಕ ಪಡೆಯಲು ನಕಲು ಹೊಡೆಯುವ ಘಟನೆಗಳು ಸಾಮಾನ್ಯವಾಗಿ ನಡೆಯುತ್ತವೆ. ಆದರೆ ಬಿವಿವಿ ಸಂಸ್ಥೆಯ ಕಾಲೇಜುಗಳು ಪ್ರಾಮಾಣಿಕತೆ ಮತ್ತು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮೊದಲ ಸಾಲಿನಲ್ಲಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಬಿವಿವಿ ಸಂಘದ ಉಪಾಧ್ಯಕ್ಷ, ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಧಾರವಾಡದ ಲೋಕೋಪಯೋಗಿ ಇಲಾಖೆಯ ವಿಶ್ರಾಂತ ಕಾರ್ಯದರ್ಶಿ ಜಿ.ಸಿ ತಲ್ಲೂರ, ಕರ್ನಾಟಕ ವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್. ಅಥಣಿ, ಕಾಲೇಜು ಆಡಳಿತ ಮಂಡಳಿಯ ಕಾರ್ಯ ಅಧ್ಯಕ್ಷ ಗುರುಬಸವ ಎಸ್. ಸೂಳಿಭಾವಿ, ಪ್ರಾಚಾರ್ಯರಾದ ಡಾ. ವಿ. ಎಸ್ ಕಟಗಿಹಳ್ಳಿಮಠ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts