More

    ರಿಯಾಯಿತಿ ದರದಲ್ಲಿ ವೈದ್ಯಕೀಯ ಸೇವೆ

    ಬಾಗಲಕೋಟೆ: ನಗರದ ಬಿವಿವಿ ಸಂಘದ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯಲ್ಲಿ ಏ.1 ರಿಂದ ನಿರಂತರವಾಗಿ ವಿವಿಧ ರೋಗಗಳಿಗೆ ಉಚಿತ ಮತ್ತು ರಿಯಾಯಿತಿ ದರದಲ್ಲಿ ವೈದ್ಯಕೀಯ ಸೇವೆ ನೀಡಲಾಗುತ್ತಿದೆ. ಬಡವರು, ಕಾರ್ಮಿಕರು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವುದು ಇದರ ಉದ್ದೇಶವಾಗಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಹೇಳಿದರು.

    ಈ ಆರೋಗ್ಯ ಸೇವೆ ಯೋಜನೆಗೆ ಬಿವಿವಿ ಸಂಘದ ವಾರ್ಷಿಕವಾಗಿ 10 ಕೋಟಿ ರೂ. ಹೊರೆಯಾಗಲಿದೆ. ಆದರೆ, ಸಾಮಾಜಿಕ ಸೇವೆ ಬದ್ಧತೆಯಿಂದ ಕಾರ್ಯಯೋಜನೆ ಹಾಕಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಕೋವಿಡ್‌ನಿಂದ ಉಂಟಾಗಿರುವ ಆರ್ಥಿಕ ಸಮಸ್ಯೆಯಿಂದಾಗಿ ಬಡ ಮತ್ತು ನಿರ್ಗತಿಕ ಜನರು ವೈದ್ಯಕೀಯ ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ಈ ಸಮಸ್ಯೆಯನ್ನು ಅರಿತು ಬಿವಿವಿ ಸಂಘದ ಎಸ್.ಎನ್. ವೈದ್ಯಕೀಯ ಮಹಾವಿದ್ಯಾಲಯ, ಕುಮಾರೇಶ್ವರ ಆಸ್ಪತ್ರೆಯಲ್ಲಿ ಉಚಿತ ಸೇವೆ ಒದಗಿಸುತ್ತಿದ್ದೇವೆ. ಹೊರ ರೋಗಿಗಳ ನೋಂದಣಿ, ಸಾಮಾನ್ಯ ರಕ್ತ ಪರೀಕ್ಷೆ ಹಾಗೂ ಮೂತ್ರ ಪರೀಕ್ಷೆ ಉಚಿತ, ಇತರ ರಕ್ತ ಪರೀಕ್ಷೆಗಳು, ಅಲ್ಟ್ರಾಸೌಂಡ್ (ಒಬಿಸಿ), ಎಕ್ಸ್‌ರೇ, ಮೆಮೋಗ್ರಾಫಿ, ಇಸಿಜಿ ಶೇ.50 ರಿಯಾಯಿತಿ, ಹೆರಿಗೆ ವಿಭಾಗದಲ್ಲಿ ಜನರಲ್ ವಾರ್ಡ್, ಸಾಮಾನ್ಯ ರಕ್ತ ಪರೀಕ್ಷೆ, ಮೂತ್ರ ಪರೀಕ್ಷೆ, ಸಾಮಾನ್ಯ ಹೆರಿಗೆ, ಅಲ್ಟ್ರಾಸೌಂಡ್ ಉಚಿತ ಹಾಗೂ ಸಿಜರಿಯನ್, ಇತರ ಚಿಕಿತ್ಸೆಗಳು ಶೇ.50 ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ. 08354-235400,235410, ಮೊ. 888445259, 8884452960, 8884452961 ಗೆ ಸಂಪರ್ಕಿಸಬೇಕು. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು.

    ಇನ್ನು ಕೋವಿಡ್ ಸಂದರ್ಭದಲ್ಲಿ 2 ಕೋಟಿ ರೂ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗಿದೆ. ಅಲ್ಲದೆ, ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯಲ್ಲಿ ಕೋವಿಡ್ ಕೇಂದ್ರವನ್ನು ಸ್ಥಾಪಿಸಿ ಒಂದು ತಿಂಗಳ ಕಾಲ ಚಿಕಿತ್ಸೆ ನೀಡಿ ತನ್ನ ಸಾಮಾಜಿಕ ಬದ್ಧತೆಯನ್ನು ಮೆರೆಯಲಾಗಿದೆ. ಕೋವಿಡ್-19 ರೋಗ ಪತ್ತೆಗಾಗಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ಸ್ಥಾಪಿಸಲಾಗಿದೆ. ಕೋವಿಡ್ ಲಸಿಕೆ ನೀಡಲು ಕೇಂದ್ರ ಸ್ಥಾಪಿಸಲಾಗಿದೆ. ಕೋವಿಡ್ ಮುಕ್ತ ಅಭಿಯಾನಕ್ಕೆ ಶ್ರಮಿಸುತ್ತಿದೆ. ಲಾಕ್‌ಡೌನ್ ಸಂದರ್ಭದಲ್ಲಿಯೂ ಸಂಘ ಸಿಬ್ಬಂದಿಗೆ ವೇತನ ಕಡಿತಗೊಳಿಸಿಲ್ಲ. ಇಎಸ್‌ಐ ಸಹಿತ ವೇತನ ನೀಡಿದೆ ಎಂದರು.

    ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಮಂಡಳಿ ಕಾರ್ಯಾಧ್ಯಕ್ಷೃ ಅಶೋಕ ಸಜ್ಜನ, ಕಾಲೇಜಿನ ಪ್ರಾಚಾರ್ಯ ಡಾ.ಅಶೋಕ ಮಲ್ಲಾಪೂರ ಉಪಸ್ಥಿತರಿದ್ದರು.

    ಕೋವಿಡ್ ಎರಡನೇ ಅಲೆ ಮೊದಲಿಗಿಂತಲೂ ವೇಗವಾಗಿ ಹರಡುತ್ತಿದೆ. ಸಾರ್ವಜನಿಕರು ನಿರ್ಲಕ್ಷೃ ವಹಿಸಬಾರದು. ಸರ್ಕಾರ ಸೂಚಿಸುವ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 45 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಂಡು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು. ಕುಮಾರೇಶ್ವರ ಆಸ್ಪತ್ರೆಯ ಕೋವಿಡ್ ಲಸಿಕೆ ಕೇಂದ್ರದಲ್ಲಿ ಪ್ರತಿದಿನ ಗರಿಷ್ಠ 200 ಜನರಿಗೆ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ 3000 ಜನರಿಗೆ ಲಸಿಕೆ ನೀಡಲಾಗಿದೆ. ಮೊದಲ ಹಂತದಲ್ಲಿ ಕೋವಿಡ್ ವಾರಿಯರ್ಸ್‌ಗೆ ಆದ್ಯತೆ ನೀಡಲಾಗಿತ್ತು. ಏ.1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಈ ಸೌಲಭ್ಯ ಕಲ್ಪಿಸಲಾಗಿದೆ.
    ವೀರಣ್ಣ ಚರಂತಿಮಠ ಶಾಸಕ ಬಾಗಲಕೋಟೆ





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts