More

    ಗ್ರಾಮೀಣ ಭಾಗದಲ್ಲಿ ಸೋಂಕಿತರ ಸಮೀಕ್ಷೆ

    ಬಾಗಲಕೋಟೆ: ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ವೈದ್ಯಕೀಯ ತಂಡ ಪ್ರತಿದಿನ ಗ್ರಾಮೀಣ ಭಾಗದಲ್ಲಿ ಸಂಚರಿಸಿ ಕೋವಿಡ್ ಸೋಂಕಿತರ ಬಗ್ಗೆ ಸಮೀಕ್ಷೆ ಕಾರ್ಯದಲ್ಲಿ ತೊಡಗಿದೆ.

    ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ, ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ(ಬೇವೂರ) ಮಾರ್ಗದರ್ಶನದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳ ಸಹಯೋಗದೊಂದಿಗೆ ಪ್ರತಿದಿನ 30 ವೈದ್ಯರ ತಂಡ ಬಾಗಲಕೋಟೆ ತಾಲೂಕಿನ ವಿವಿಧ ಗ್ರಾಮಗಳ ಮನೆ ಮನೆಗೆ ತೆರಳಿ ಜ್ವರ, ಉಸಿರಾಟದ ತೊಂದರೆ, ಕೆಮ್ಮು ಲಕ್ಷಣದಿಂದ ಬಳಲುತ್ತಿರುವ ರೋಗಿಗಳನ್ನು ಗುರುತಿಸುವುದರೊಂದಿಗೆ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ತೀವ್ರ ಉಸಿರಾಟದ ತೊಂದರೆ, ಜ್ವರ ಕಂಡುಬಂದ ರೋಗಿಗಳನ್ನು ಬಾಗಲಕೋಟೆಯ ಸರ್ಕಾರಿ ಆಸ್ಪತ್ರೆ ಮತ್ತು ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗುತ್ತಿದೆ.

    ಗುರುವಾರ ಸುತಗುಂಡಾರ, ಬೆಣ್ಣೂರ ಮತ್ತು ಬೇವೂರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಹಳ್ಳೂರು, ಚೌಡಾಪುರ, ಬೈರಮಟ್ಟಿ, ನೀರಲಕೇರಿ, ಸಿಕ್ಕೇರಿ, ಮುಚಖಂಡಿ ಮತ್ತು ಶಿರೂರ ಗ್ರಾಮಗಳಲ್ಲಿ ಒಟ್ಟು 24 ವೈದ್ಯರ ತಂಡ ಆರೋಗ್ಯ ಸಮೀಕ್ಷೆ ನಡೆಸಿದರು.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts