More

    ವಿಶ್ವಾಸ ಇದೆ ನನಗೆ ಅನ್ಯಾಯ ಆಗಲ್ಲ..!

    ಬಾಗಲಕೋಟೆ ಸಚಿವ ಸಂಪುಟ ವಿಸ್ತರಣೆ ವೇಳೆ ಬೆಳಗಾವಿ ಜಿಲ್ಲೆಗೆ ಮತ್ತಷ್ಟು ಸಚಿವ ಸ್ಥಾನ ಸಿಗುವುದು ಪಕ್ಕಾ ಆದರೂ ತಮ್ಮನ್ನು ಕೈಬಿಡುತ್ತಾರೆ ಎನ್ನುವ ಆತಂಕ ಇಲ್ಲ. ಪಕ್ಷ ಸಂಘಟನೆ ಮತ್ತು ಸಮಾಜ ಸೇವೆಯಿಂದ ಗುರುತಿಸಿಕೊಂಡಿರುವ ತಮಗೆ ಅನ್ಯಾಯ ಆಗಲ್ಲ ಎನ್ನುವ ವಿಶ್ವಾಸ ಇದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

    ನಗರದಲ್ಲಿ ಇರುವ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಅವರನ್ನು ಭಾನುವಾರ ಭೇಟಿ ಮಾಡಿ, ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಮುಖ್ಯಮಂತ್ರಿಗಳು ಬೆಳಗಾವಿಗೆ ಬಂದಿದ್ದಾಗ ಈಗ ಇರುವ ಸಚಿವರನ್ನು ಕೈಬಿಡಲ್ಲ. ಹಾಗೆಯೆ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಗಿರುವ ಎಲ್ಲ ಶಾಸಕರಿಗೂ ಸಚಿವರನ್ನಾಗಿ ಮಾಡುತ್ತೇವೆ ಎಂದಿದ್ದಾರೆ. ಇದು ಹೈಕಮಾಂಡ್ ನಿರ್ಧಾರ ಸಹ ಆಗಿರಬಹುದು. ಅದಾಗ್ಯೂ ಹೈಕಮಾಂಡ್‌ದಿಂದ ಏನೇ ಆದೇಶ ಬಂದರೂ ಅದಕ್ಕೆ ನಾನು ಸೇರಿ ಎಲ್ಲ ಮಂತ್ರಿಗಳು ಸಿದ್ಧರಿದ್ದೇವೆ ಎಂದು ಹೇಳಿದರು.

    ಹೀಗಾಗಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧಳಾಗಿ ಪಕ್ಷ ಸಂಘಟನೆ ಹಾಗೂ ಶಾಸಕಿ ಸ್ಥಾನವನ್ನು ಸಮರ್ಥವಾಗಿ ನಿರ್ವಹಣೆ ಮಾಡುವುದಾಗಿ ಶಶಿಕಲಾ ಜೊಲ್ಲೆ ಹೇಳಿದರು. ಬಿಜೆಪಿ ಅಧಿಕಾರಕ್ಕೆ ಬರಲು ಶಾಸಕರ ತ್ಯಾಗ ಇದೆ. ಅದನ್ನು ಮರೆಯುಂತಿಲ್ಲ. ಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತಾರೆ. ಯಡಿಯೂರಪ್ಪಾಜಿ ಮಾತಿಗೆ ತಪ್ಪಿದವರಲ್ಲ. ಕಾಯ್ದು ನೋಡಿ ನ್ಯಾಯ ಕೊಡುವ ನಿಟ್ಟಿನಲ್ಲಿ ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

    ಪೌಷ್ಟಿಕ ಆಹಾರ ಪೂರೈಕೆ
    ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆಯಾದ ಬಳಿಕ ಇಲಾಖೆಯಲ್ಲಿ ಅನೇಕ ಸುಧಾರಣಾ ಕ್ರಮ ತೆಗೆದುಕೊಂಡಿದ್ದೇನೆ. ಖಾಲಿ ಇರುವ ಹುದ್ದೆಗಳಲ್ಲಿ ಶೇ. 50 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಿದ್ದೇನೆ. ಹಾಗೆಯೆ ಮಕ್ಕಳಲ್ಲಿ ಪೌಷ್ಟಿಕತೆ ಕೊರೆತ ಆಗದಂತೆ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಪೂರೈಕೆ ಮಾಡಲಾಗುತ್ತಿದೆ. ನಾನು ಮಂತ್ರಿಯಾದ ಬಳಿಕ ರಾಜ್ಯದ ಎಲ್ಲ ಮೂವತ್ತು ಜಿಲ್ಲೆಗಳಲ್ಲಿ ಜಾರಿಗೊಳಿಸಿದ್ದೇನೆ ಎಂದು ಸಚಿವೆ ಶಶಿಕಲಾ ಹೇಳಿದರು.

    ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್
    ಅಂಗನವಾಡಿಗಳಿಗೆ ಪೂರೈಕೆ ಆಗುವ ಆಹಾರದಲ್ಲಿ ಸೋರಿಕೆ ತಡೆಗಟ್ಟುವುದು ಹಾಗೂ ಕಾರ್ಯಕರ್ತೆಯರು ಹಾಗೂ ಮಕ್ಕಳ ಹಾಜರಾತಿ ನಿಖರವಾಗಿ ತಿಳಿಯಲು ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಕೊಡಲಾಗುತ್ತದೆ. ಅನೇಕ ಕಡೆಗೆ ದವಸ ಧಾನ್ಯ ದುರುಪಯೋಗ ಆಗುವುದನ್ನು ತಡೆಯಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು.

    ಅಂಗವಿಕಲರ ನಿಧಿ ಸಮರ್ಪಕ ಬಳಕೆ
    ರಾಜ್ಯದಲ್ಲಿ ಶಾಸಕರ ನಿಧಿಯಲ್ಲಿ ಅಂಗವಿಕಲರ ನಿಧಿಯನ್ನು ಸಮರ್ಪಕ ಬಳಕೆ ಮಾಡಲಾಗುತ್ತಿದೆ. ಟ್ರೈಸಿಕಲ್ಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ. ಸ್ವಸಹಾಯ ಸಂಘಗಳಿಗೆ ನೆರವು ನೀಡಲಾಗುತ್ತಿದೆ. ಯಾರಾದರೂ ಶಾಸಕರು ನಿಧಿ ಬಳಕೆ ಮಾಡಿಲ್ಲ ಎನ್ನುವುದು ಗಮನಕ್ಕೆ ಬಂದಲ್ಲಿ ಆ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

    ಅಂಗವಿಕಲರ ನಿಧಿ ಸಮರ್ಪಕ ಬಳಕೆ
    ರಾಜ್ಯದಲ್ಲಿ ಶಾಸಕರ ನಿಧಿಯಲ್ಲಿ ಅಂಗವಿಕಲರ ನಿಧಿಯನ್ನು ಸಮರ್ಪಕ ಬಳಕೆ ಮಾಡಲಾಗುತ್ತಿದೆ. ಟ್ರೈಸಿಕಲ್ಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ. ಸ್ವಸಹಾಯ ಸಂಘಗಳಿಗೆ ನೆರವು ನೀಡಲಾಗುತ್ತಿದೆ. ಯಾರಾದರೂ ಶಾಸಕರು ನಿಧಿ ಬಳಕೆ ಮಾಡಿಲ್ಲ ಎನ್ನುವುದು ಗಮನಕ್ಕೆ ಬಂದಲ್ಲಿ ಆ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts