20.4 C
Bangalore
Monday, December 9, 2019

ಉ.ಕ. ಭಾಗದ ನಾಯಕರಿಗೆ ಸಚಿವ ಸ್ಥಾನ ನೀಡಲಿ

Latest News

ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬಾಗಲಕೋಟೆ: ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರಾದ ಮುರುಗೇಶ ನಿರಾಣಿ, ಬಸನಗೌಡ ಪಾಟೀಲ ಯತ್ನಾಳ, ಉದಾಸಿ ಹಾಗೂ ಉಮೇಶ ಕತ್ತಿ ಅವರಿಗೆ ಹಿರಿತನ ಆಧಾರದ ಮೇಲೆ ಸಚಿವ ಸ್ಥಾನ ನೀಡಬೇಕು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಬಣಜಿಗ, ಪಂಚಮಸಾಲಿ ಅಂತಲ್ಲ, ವಾಲ್ಮೀಕಿ ಸಮಾಜವೂ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಅವಕಾಶ ಸಿಗದ ಹಿರಿಯರಿಗೆ ಮಂತ್ರಿಸ್ಥಾನ ದೊರೆಯುವಂತಾಗಬೇಕು ಎಂದರು.

ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ಪ್ರಯತ್ನ ಬಿಜೆಪಿಯಲ್ಲಿ ಆಗಬಾರದು. ನಿಮ್ಮ ಭಿನ್ನಾಭಿಪ್ರಾಯ ಇದ್ದರೇ ಪಕ್ಷದ ಒಳಗಡೆ ಬಗೆಹರಿಸಿಕೊಳ್ಳಬೇಕು. ಇದು ಬರೀ ಲಿಂಗಾಯತರ ಬೇಡಿಕೆಯಲ್ಲ ಕನ್ನಡಿಗರ ಬೇಡಿಕೆಯಾಗಿದೆ ಎಂದು ಹೇಳಿದರು.

ಬೆಳಗಾವಿ ರಾಜಕಾರಣದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ಲಕ್ಷ್ಮೀ ಹೆಬ್ಬಾಳಕರ ಅವರ ಉತ್ತಮ ಕೆಲಸಗಳಿಗೆ ನಮ್ಮ ಸಮಾಜದ ಬೆಂಬಲ ಸದಾ ಇರುತ್ತದೆ. ಅವರ ಬಗ್ಗೆ ರಮೇಶ ಜಾರಕಿಹೊಳಿ ಮಾಡಿರುವ ಟೀಕೆ ಕೇವಲ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದರು.

ಪ್ರವಾಹ ಪರಿಹಾರದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಅಲ್ಪತೃಪ್ತಿ ತಂದಿದೆ. ಸಂಪೂರ್ಣ ತೃಪ್ತಿ ಅಗಬೇಕು ಎನ್ನುವ ನಿಟ್ಟಿನಲ್ಲಿ ಪರಿಹಾರ ನೀಡಬೇಕು. ಮೊದಲ ಹಂತದ ಸರ್ವೇ ಕಾರ್ಯದಲ್ಲಿ ಅನೇಕ ಸಮಸ್ಯೆಗಳಾಗಿವೆ. ಎರಡನೇ ಹಂತದ ಸರ್ವೇ ಸಮರ್ಪಕವಾಗಿ ಆಗಬೇಕು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ
ಲಿಂಗಾಯತ ಎಲ್ಲ ಒಳ ಪಂಗಡಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬೇಕು. ಅದಕ್ಕಾಗಿ ಹೋರಾಟ ನಡೆಯುತ್ತಿದೆ. ಮುಂದಿನವಾರ ಶಿವಾನಂದ ಜಾಮದಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ ಮಾಡಬೇಕು ಎಂದು ಒತ್ತಾಯಿಸಲಾಗುವುದು. ಶೀಘ್ರದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...