More

    ಜಿಲ್ಲೆಯಲ್ಲಿ ಕರೋನಾ ವೈರಸ್ ಇಲ್ಲ

    ಬಾಗಲಕೋಟೆ: ಕರೋನಾ ವೈರಸ್ ಎಂಬ ರೋಗವು ತೀವ್ರವಾಗಿ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಾಗಿದ್ದು, ಚೀನಾ ದೇಶದಲ್ಲಿ ಈ ರೋಗ ಕಂಡುಬಂದಿದೆ. ಜಿಲ್ಲೆಯಲ್ಲಿ ಕರೋನಾ ವೈರಸ್ ಇಲ್ಲ ಎಂದು ಜಿ.ಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದರು.

    ಕರೋನಾ ವೈರಸ್‌ನಿಂದ ಬಳಲುವ ವ್ಯಕ್ತಿಗಳಲ್ಲಿ ತೀವ್ರವಾದ ಜ್ವರ, ಕೆಮ್ಮು ನೆಗಡಿ, ಉಸಿರಾಟದ ತೊಂದರೆ ಹಾಗೂ ಬೇದಿ ಲಕ್ಷಣಗಳು ಕಂಡುಬರುತ್ತವೆ. ಇಂತಹ ಲಕ್ಷಣಗಳು ಜಿಲ್ಲೆಯಲ್ಲಿ ಕಂಡುಬಂದರೆ ತಕ್ಷಣ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕು. ಚೀನಾ ದೇಶದಿಂದ ಮರಳಿ ಬಂದವರು ಕೂಡಲೇ ಆಸ್ಪತ್ರೆಗಳಲ್ಲಿ ಪರೀಕ್ಷೆ ಮಾಡಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

    ಜಿಲ್ಲೆಯಲ್ಲಿ ಕೋರೋನಾ ಪ್ರಕರಣಗಳು ಇಲ್ಲಿವರೆಗೆ ಕಂಡುಬಂದಿರುವದಿಲ್ಲ. ಒಂದು ವೇಳೆ ಕಂಡುಬಂದಲ್ಲಿ ಮುಂಜಾಗ್ರತೆಯಾಗಿ ಅಗತ್ಯವಿರುವ ಔಷಧಿಗಳನ್ನು ಹಾಗೂ ತಪಾಸಣೆಗೆ ಬೇಕಾಗುವ ಸಾಮಗ್ರಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ಜಿಲ್ಲಾ ಸಮೀಕ್ಷಣಾ ಘಟಕದಲ್ಲಿ ಸಂಗ್ರಹಿಸಲಾಗಿದೆ. ಶ್ವಾಸಕೋಶದ ತೊಂದರೆ ಇದ್ದವರು ಮೇಲಿಂದ ಮೇಲೆ ಸಾಬೂನಿನಿಂದ ಕೈಗಳನ್ನು ತೊಳೆಯಬೇಕು. ಕೆಮ್ಮುವಾಗ ಹಾಗೂ ಸೀನುವಾಗ ಮೂಗು ಹಾಗೂ ಬಾಯಿಯನ್ನು ಮುಚ್ಚಿಕೊಳ್ಳಬೇಕು. ತೀವ್ರವಾದ ಕೆಮ್ಮು ಹಾಗೂ ಶ್ವಾಶಕೋಶದ ತೊಂದರೆ ಇರುವ ವ್ಯಕ್ತಿಗಳಿಂದ ದೂರವಿರಬೇಕು. ಹಸ್ತಲಾಘವ ಅಥವಾ ಅಪ್ಪುಗೆಯನ್ನು ವರ್ಜಿಸಬೇಕು ಎಂದು ತಿಳಿಸಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಣಾಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಸುದ್ದಿಗೋಷ್ಠಿಯಲ್ಲಿ ಇದ್ದರು.

    ಅನಧಿಕೃತ ಮದ್ಯ ಮಾರಾಟಗಾರರ ವಿರುದ್ಧ ಕ್ರಮ
    ಈ ವೇಳೆ ಅಬಕಾರಿ ಇಲಾಖೆಯ ಉಪ ಅಧೀಕ್ಷಕ ಎಸ್.ಎಂ.ಕಮತರ ಮಾತನಾಡಿ, ಅಬಕಾರಿ ಕಾಯ್ದೆ ಅನ್ವಯ ಲೈಸನ್ಸ್ ಇದ್ದರೇ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ. ಅನಧಿಕೃತ ಮಾರಾಟ ಕಂಡು ಬಂದಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಏಪ್ರೀಲ್-19 ರಿಂದ ಇಲ್ಲಿವರೆಗೆ ಒಟ್ಟು 401 ಪ್ರಕರಣಗಳನ್ನು ದಾಖಲಿಸಲಾಗಿದ್ದು, 10.28 ಲಕ್ಷ ರೂ. ದಂಡ ವಿಧಿಸಲಾಗಿದೆ. ಪರವಾಣಿಗೆ ಇಲ್ಲದೆ ಮದ್ಯ ಮಾರಾಟ ಮಾಡಿದಲ್ಲಿ ಈ ಮೊದಲು 2 ಸಾವಿರ ರೂ. ದಂಡ ವಿಧಿಸಲಾಗುತ್ತಿತ್ತು. ಇದೀಗ 5 ಸಾವಿರ ದಂಡ ವಿಧಿಸಲಾಗುತ್ತದೆ. ಮದ್ಯ ಮಾರಾಟಕ್ಕೆ ಯಾವುದೇ ಅಂಗಡಿಗಳಿಗೆ ಟಾರ್ಗೆಟ್ ನೀಡಿಲ್ಲ. ಕೂಡಲಸಂಗಮದಲ್ಲಿ ನಡೆಯುತ್ತಿರುವ ಹೋರಾಟ ಸರ್ಕಾರದ ಮಟ್ಟದಲ್ಲಿ ಆಗುವ ಕೆಲಸ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts