More

    ಚಿಕಿತ್ಸೆಗಾಗಿ ರೋಗಿಗಳ ಅಲೆದಾಟ

    ಬಾಗಲಕೋಟೆ: ಕೇಂದ್ರ ಸರ್ಕಾರ ಆಯುಷ್ ವೈದ್ಯರಿಗೆ ಶಸ್ತ್ರ ಮಾಡಲು ಅನುಮತಿ ನೀಡಿರುವುದನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ಬಂದ್‌ಗೆ ಕರೆ ನೀಡಿದ ಹಿನ್ನಲೆಯಲ್ಲಿ ಖಾಸಗಿ ವೈದ್ಯರು ಹೊರ ರೋಗಿಗಳ ವಿಭಾಗ(ಒಪಿಡಿ) ಸೇವೆ ಬಹಿಷ್ಕರಿಸಿದ ಪರಿಣಾಮ ಜಿಲ್ಲೆಯಲ್ಲಿ ಶುಕ್ರವಾರ ಚಿಕಿತ್ಸೆಗಾಗಿ ರೋಗಿಗಳು ಅಲೆದಾಡಿದರು.

    ಬಾಗಲಕೋಟೆ ನಗರ ಹಾಗೂ ಮುಧೋಳ, ಜಮಖಂಡಿ, ರಬಕವಿ-ಬನಹಟ್ಟಿ, ಬೀಳಗಿ, ತೇರದಾಳ, ಮಹಾಲಿಂಗಪುರ, ಲೋಕಾಪುರ, ಕಲಾದಗಿ, ಬಾದಾಮಿ, ಕೆರೂರ, ಗುಳೇದಗುಡ್ಡ, ಕಮತಗಿ, ಅಮೀನಗಡ, ಹುನಗುಂದ, ಇಳಕಲ್ಲ ಸೇರಿದಂತೆ ಜಿಲ್ಲೆಯ ಎಲ್ಲ ಭಾಗದಲ್ಲಿಯೂ ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯಕೀಯ ಸೇವೆ ವ್ಯತ್ಯಯ ಉಂಟಾಯಿತು. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಹೊರ ರೋಗಿಗಳ ವೈದ್ಯಕೀಯ ಸೇವೆ ಸಂಪೂರ್ಣ ಬಂದ್ ಆಗಿತ್ತು.

    ಒಂದು ಕಡೆ ಸಾರಿಗೆ ನೌಕರರ ಮುಷ್ಕರದ ಪರಿಣಾಮ ಬಸ್‌ಗಳು ಇಲ್ಲದೆ ಸಾರ್ವಜನಿಕರು ಹರಸಾಹಸ ಪಡುತ್ತಿದ್ದರೇ, ಇನ್ನೊಂದೆಡೆ ವೈದ್ಯಕೀಯ ಸೇವೆ ದೊರೆಯದೆ ರೋಗಿಗಳು ಪರದಾಡಿದರು. ಬಸ್ ಇಲ್ಲದಿದ್ದರು ಸಹ ಕೆಲವು ರೋಗಿಗಳು ವೈಯಕ್ತಿಕ, ಖಾಸಗಿ ವಾಹನಗಳನ್ನು ತೆಗೆದುಕೊಂಡು ಖಾಸಗಿ ಆಸ್ಪತ್ರೆಗಳಿಗೆ ತೆರಳಿದರು. ಅಲ್ಲಿಯೂ ಸೇವೆ ದೊರೆಯದ ಪರಿಣಾಮ ರೋಗಿಗಳ ತೀವ್ರ ಸಂಕಷ್ಟ ಅನುಭವಿಸಿದರು. ಇನ್ನು ಖಾಸಗಿ ವೈದ್ಯರ ಮುಷ್ಕರ ಪರಿಣಾಮ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿಗಳಿಗೆ ರಜೆ ರದ್ದು ಪಡಿಸಲಾಗಿತ್ತು. ಇದರಿಂದ ಹಲವು ರೋಗಿಗಳು ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದುಕೊಂಡರು.

    ಒಟ್ಟಾರೆ ಭಾರತೀಯ ವೈದ್ಯಕೀಯ ಸಂಘದ ಮುಷ್ಕದರಿಂದ ಜಿಲ್ಲೆಯಲ್ಲಿ 150 ನರ್ಸಿಂಗ್ ಹೋಮ್, 10 ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಸೇರಿದಂತೆ ಒಟ್ಟು 698 ಸಾಮಾನ್ಯ ಆಸ್ಪತ್ರೆಗಳು, ಕ್ಲಿನಿಕ್‌ಗಳ ಸೇವೆ ಸಂಪೂಣ ಬಂದ್ ಆಗಿದ್ದವು. ಒಳ ರೋಗಿಗಳಿಗೆ, ತುರ್ತು ಚಿಕಿತ್ಸೆಗೆ ಯಾವುದೇ ಸಮಸ್ಯೆ ಉಂಟಾಗಲಿಲ್ಲ. ಔಷಧಿ ಮಳಗಿ, ಅಂಬುಲೆನ್ಸ್ ಸೇವೆ ಎಂದಿನಂತೆ ಇತ್ತು. ಇನ್ನು ವೈದ್ಯರು ಒಳ ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts