22.8 C
Bengaluru
Saturday, January 18, 2020

ಶೀಘ್ರ ಚಾಲುಕ್ಯ ಪ್ರಾಧಿಕಾರ ಸಭೆ

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಬಾಗಲಕೋಟೆ: ಇತ್ತೀಚೆಗೆ ರಚಿಸಲಾಗಿರುವ ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಧಿಕೃತ ಸಭೆಯನ್ನು ಶೀಘ್ರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ ಕೆ.ರಾಜೇಂದ್ರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಾಲುಕ್ಯರ ನಾಡಿನ ಐಹೊಳೆ, ಬಾದಾಮಿ, ಪಟ್ಟದಕಲ್ಲು, ಮಹಾಕೂಟದ ಸುತ್ತಲಿನ ಪಾರಂಪರಿಕ ಪ್ರದೇಶ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮುಂದಿನ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ಭಾರತೀಯ ಪುರಾತತ್ವ ಇಲಾಖೆ, ನಗರ ಯೋಜನೆ, ರಾಜ್ಯ ಪ್ರವಾಸೋದ್ಯಮ ಇಲಾಖೆಗಳು ಹಾಗೂ ಇತರ ಸಂಬಂಧಿಸಿದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಸಂಪನ್ಮೂಲ ವ್ಯಕ್ತಿಗಳನ್ನೊಳಗೊಂಡ ಸಭೆಯನ್ನು ಕರೆದು ಚಾಲುಕ್ಯ ನಾಡಿನ ಪ್ರದೇಶದ ಅಭಿವೃದ್ಧಿಗೆ ಚರ್ಚಿಸಲಾಗುವುದು. ಹಂಪಿ ಮಾದರಿಯಲ್ಲಿ ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿ ಹಾಗೂ ಮಾಸ್ಟರ್ ಪ್ಲಾ್ಲೃನ್ ತಜ್ಞರ ಸಲಹೆ ಪಡೆದು ಯೋಜನೆ ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೈಸೂರು ಪುರಾತತ್ವ ಸಂಗ್ರಹಾಲಯಗಳು ಮತ್ತು ಪಾರಂಪರಿಕ ಇಲಾಖೆಯ ಉಪನಿರ್ದೇಶಕಿ ನಿರ್ಮಲಾ ಮಠಪತಿ ಮಾತನಾಡಿ, ಚಾಲುಕ್ಯ ಪ್ರಾಧಿಕಾರಕ್ಕೆ ರಾಜ್ಯ ಮಟ್ಟದ ಸಲಹಾ ಸಮಿತಿಯನ್ನು ಸಹ ರಚಿಸಲಾಗಿದ್ದು, ಈ ಸಮಿತಿಗೆ ಮುಖ್ಯಮಂತ್ರಿ ಅಧ್ಯಕ್ಷರಾಗಿದ್ದಾರೆ. ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಮಂತ್ರಿ ಉಪಾಧ್ಯಕ್ಷರಾಗಿರುತ್ತಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು ಪ್ರಾಧಿಕಾರದ ಸದಸ್ಯರಾಗಿರುತ್ತಾರೆ ಎಂದು ತಿಳಿಸಿದರು.

ಇನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಜಿಲ್ಲಾ ಸಮಿತಿ ಅಧ್ಯಕ್ಷರಾಗಿದ್ದು, ಮೈಸೂರು ಪುರಾತತ್ವ ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರು, ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು, ಬಾಗಲಕೋಟೆಯ ಪೊಲೀಸ್ ಸೂಪರಿಂಟೆಂಡೆಂಟ್, ಧಾರವಾಡದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಅಧೀಕ್ಷಕ ಪುರಾತತ್ವ ತಜ್ಞರು, ಬಾಗಲಕೋಟೆ ಜಿಪಂ ಸಿಇಒ, ಅರಣ್ಯ ಉಪ ಸಂರಕ್ಷಕ, ಬಾದಾಮಿಯ ಪಟ್ಟಣದ ಪುರಸಭೆ ಆಯುಕ್ತ, ಬಾಗಲಕೋಟೆ ವೃತ್ತದ ಸೂಪರಿಂಟೆಂಡೆಂಟ್ ಇಂಜಿನಿಯರ್, ಉಪ ಪರಿಸರ ಅಧಿಕಾರಿ, ಜಲಸಂಪನ್ಮೂಲ ಇಲಾಖೆಯ ಕಾರ್ನಿರ್ವಾಹಕ ಇಂಜಿನಿಯರ್, ಪುರಾತತ್ವ ಇಲಾಖೆ ಸದಸ್ಯರಾಗಿದ್ದು, ಪ್ರಾಧಿಕಾರದ ಆಯುಕ್ತರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ ಎಂದು ಹೇಳಿದರು.

ಧಾರವಾಡ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕ ಎಸ್.ಕೆ. ವಾಸುದೇವ, ದಕ್ಷಿಣ ವಲಯದ ಆರ್ಕಾಲಜಿಕಲ್ ಕಾಂನ್ಸ್‌ರ್‌ವೇಟರ್ ಇಂಜಿನಿಯರ್ ಎಸ್.ಎಂ. ಪೂಜಾರಿ, ಬಾದಾಮಿ ಪುರಸಭೆ ಮುಖ್ಯಾಧಿಕಾರಿ ಜ್ಯೋತಿ ಗಿರೀಶ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ದೇವೇಂದ್ರ ಧನಪಾಲ್, ಕೆಎಸ್‌ಪಿಸಿಬಿಯ ಸೂಪರಿಂಟೆಂಡೆಂಟ್ ಅನ್ನಪೂರ್ಣ ಅಥಣಿ, ಧಾರವಾಡ ಎಎಸ್‌ಐನ ತೇಜಸ್ವಿ ಎನ್., ಭಾರತೀಯ ಪುರಾತತ್ವ ಇಲಾಖೆಯ ಎಂ.ಬಿ. ಕುರುವಥಿ ಉಪಸ್ಥಿತರಿದ್ದರು.

ಬಾದಾಮಿ ತಟಕೋಟೆ, ಐಹೊಳೆ ಹಾಗೂ ಪಟ್ಟದಕಲ್ಲು ಪಾರಂಪರಿಕ ತಾಣಗಳ ಸುತ್ತಲಿನ ಮನೆಗಳ ಸ್ಥಳಾಂತರಕ್ಕೆ ಈಗಾಗಲೇ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳುವ ಹಂತದಲ್ಲಿದೆ. ಸದ್ಯ ಪ್ರಾಧಿಕಾರದ ಕಚೇರಿ ಬಾಗಲಕೋಟೆ ಪ್ರವಾಸೋದ್ಯಮ ಕಚೇರಿಯಲ್ಲೇ ಕಾರ್ಯನಿರ್ವಹಿಸಲಿದೆ.
– ಕೆ.ರಾಜೇಂದ್ರ ಜಿಲ್ಲಾಧಿಕಾರಿ

50 ಲಕ್ಷ ರೂ. ಅನುದಾನ ಬಿಡುಗಡೆ
ಸದ್ಯ ಪ್ರಾಧಿಕಾರದ ಕಾರ್ಯಚಟುವಟಿಕೆ ನಿರ್ವಹಣೆಯನ್ನು ಧಾರವಾಡದ ಪುರಾತತ್ವ ಇಲಾಖೆಯ ಉಪನಿರ್ದೇಶಕ ಡಾ.ಎಸ್.ಕೆ. ವಾಸುದೇವ ನಿರ್ವಹಿಸಲಿದ್ದಾರೆ. ಒಟ್ಟು 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಮೈಸೂರಿನ ರಾಜ್ಯ ಪುರಾತತ್ವ, ವಸ್ತು ಸಂಗ್ರಹಾಲಯಗಳ ಹಾಗೂ ಪರಂಪರೆ ಇಲಾಖೆ ಆಯುಕ್ತ ಡಾ.ವೆಂಕಟೇಶ ಕಟ್ಟಿ ಹೇಳಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...