More

    ದಲಿತರು ಕಾಂಗ್ರೆಸ್ ಪಕ್ಷದ ಬೆನ್ನೆಲಬು

    ಬಾಗಲಕೋಟೆ: ದಲಿತರು ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.

    ನವನಗರದ ಖಾಸಗಿ ಹೊಟೇಲ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಠ ಜಾತಿ ವಿಭಾಗದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಬ್ಲಾಕ್ ಅಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ ಬೆಂಬಲ ಸದಾ ಪಕ್ಷಕ್ಕೆ ಇದೆ ಎಂದರು.

    ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರ ಅವಧಿಯಲ್ಲಿ ದೀನ ದಲಿತರಿಗೆ ಹಿಂದುಳಿದವರ ಪರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಎಸ್ಸಿ,ಎಸ್ಟಿ ಜನಾಂಗದವರಿಗೆ ಮೀಸಲಿಟ್ಟ ಅನುದಾನವನ್ನು ಬೇರೆಯವರಿಗೆ ವರ್ಗಾವಣೆ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಕಾನೂನನ್ನು ಜಾರಿಗೆ ತಂದರು. ಎಸ್ಸಿ,ಎಸ್ಟಿ ಗುತ್ತಿಗೆದಾರರಿಗೆ ಟೆಂಡರ್‌ನಲ್ಲಿ ಮೀಸಲಾತಿಯನ್ನು ದೊರಕಿಸಿಕೊಟ್ಟ ಕೀರ್ತಿ ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಕಾರಣ ಇಂದಿನ ಯುವಕರು ಈ ಎಲ್ಲ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

    ಜಿಲ್ಲಾ ಕಾಂಗ್ರೆಸ್ ಎಸ್ಸಿ ವಿಭಾಗದ ಅಧ್ಯಕ್ಷ ರಾಜು ಎಸ್.ಮನ್ನಿಕೇರಿ ಮಾತನಾಡಿ, ಜಿಲ್ಲೆಯಲ್ಲಿ ನಮ್ಮ ಎಲ್ಲಾ ಬ್ಲಾಕ್ ಅಧ್ಯಕ್ಷರ ಸಹಕಾರದೊಂದಿಗೆ ಪಕ್ಷವನ್ನು ಸಂಘಟನೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಮುಂಬರುವ ದಿನಗಳಲ್ಲಿ ಎಲ್ಲಾ ತಾಲೂಕುಗಳ ಮಾಜಿ ಶಾಸಕರ, ಶಾಸಕರ, ಪರಾಜಿತ ಅಭ್ಯರ್ಥಿಗಳ ಮಾರ್ಗದರ್ಶನಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು ಎಂದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಮಾಜಿ ಶಾಸಕ ಜೆ.ಟಿ.ಪಾಟೀಲ, ಮುಖಂಡರಾದ ಶರಣಪ್ಪ ಆಮದಿಹಾಳ, ರಾಜು ಲಮಾಣಿ, ವಿ.ಆರ್.ಚವ್ಹಾಣ, ಚಂದ್ರಶೇಖರ ರಾಠೋಡ, ಹಾಜಿಸಾಬ ದಂಡಿನ, ಎಸ್.ಎನ್.ರಾಂಪೂರ, ಬಲರಾಮ ಲಮಾಣಿ, ಕೀರಪ್ಪ ಮಾದರ (ಚಿಕ್ಕಶೆಲ್ಲಿಕೇರಿ), ಸುರೇಶ ಮನ್ನೇರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts