More

    ಸೇವಾಕರ್ತರಿಗೆ ಚಪ್ಪಾಳೆ ತಟ್ಟಿ ಕೃತಜ್ಞತೆ

    ಬಾಗಲಕೋಟೆ: ವಿಶ್ವವನ್ನೇ ತಲ್ಲಣಗೊಳಿಸಿರುವ ಜಾಗತಿಕ ಮಹಾಮಾರಿ ಕರೊನಾ ರೋಗವನ್ನು ನಿಯಂತ್ರಿಸಲು ಮತ್ತು ಪೂರ್ಣ ಪ್ರಮಾಣದಲ್ಲಿ ತಡೆಗಟ್ಟುವ ನಿಟ್ಟಿನಲ್ಲಿ ನಗರದ ಬಿವಿವಿ ಸಂಘದ ಕಲಾ ಮಹಾವಿದ್ಯಾಲಯದಲ್ಲಿ ಶನಿವಾರ ಕರೊನಾ ತಡೆ ಜಾಗೃತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು.

    ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಮಹಾವಿದ್ಯಾಲಯದ ಮುಖ್ಯದ್ವಾರ, ಕಿಟಕಿ, ಬಾಲ್ಕನಿ ಸೇರಿ ಎಲ್ಲೆಡೆ ಬಿಡಿ ಬಿಡಿಯಾಗಿ ನಿಂತುಕೊಂಡು ಮಧ್ಯಾಹ್ನ 12 ರಿಂದ 12.10 ವರೆಗೆ ನಿರಂತರವಾಗಿ ಚಪ್ಪಾಳೆ ತಟ್ಟುವ ಮೂಲಕ ಜಾಗೃತಿ ಮೂಡಿಸಿದರು. ರೋಗ ನಿಯಂತ್ರಣಕ್ಕೆ ಜೀವದ ಹಂಗು ತೊರೆದು ಸೇವೆ ಮಾಡುತ್ತಿರುವ ವೈದ್ಯರು, ಸ್ವಯಂ ಸೇವಕರು, ದಾದಿಯರು, ಸಾರಿಗೆ ಸಂಪರ್ಕ ಸೇವಕರು, ಸಾರ್ವಜನಿಕ ವಿತರಣಾ ಕಾರ್ಯಕರ್ತರು, ಪತ್ರಕರ್ತರು ಮತ್ತಿತರರಿಗೆ ಸಾಮೂಹಿಕವಾಗಿ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಲಾಯಿತು.

    ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ಡಾ.ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಎನ್. ಅಥಣಿ, ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ವಿಜಯಕುಮಾರ ಎಸ್.ಕಟಗಿಹಳ್ಳಿಮಠ ಸೇರಿ ಸಂಘದ ವಿವಿಧ ಮಹಾವಿದ್ಯಾಲಯಗಳ ಪ್ರಾಚಾರ್ಯರು, ಎಲ್ಲ ಬೋಧಕ – ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ಕರೊನಾ ಎನ್ನುವ ಹೆಮ್ಮಾರಿ ತಡೆಗಟ್ಟುವ ನಿಟ್ಟಿನಲ್ಲಿ ನಾವೆಲ್ಲ ಪಣತೊಡಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ದೂರದ ಪ್ರಯಾಣ, ಸಭೆ, ಸಮಾರಂಭಗಳನ್ನು ಮುಂದೂಡಬೇಕು. ಭಾನುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ಬೆಂಬಲಿಸಬೇಕು.
    ವೀರಣ್ಣ ಚರಂತಿಮಠ, ಶಾಸಕ ಬಾಗಲಕೋಟೆ





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts