More

    ಜಿಲ್ಲೆಯಲ್ಲಿ 57 ಹೊಸ ಪ್ರಕರಣ ಪತ್ತೆ

    ಬಾಗಲಕೋಟೆ: ಜಿಲ್ಲೆಯಲ್ಲಿ ಮತ್ತೆ ಹೊಸದಾಗಿ 57 ಕರೊನಾ ಪ್ರಕರಣಗಳು ಬುಧವಾರ ದೃಢಪಟ್ಟಿವೆ. 80 ಜನ ಕೋವಿಡ್‌ನಿಂದ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

    ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 11, ಬಾದಾಮಿ 11, ಹುನಗುಂದ 5, ಬೀಳಗಿ 1, ಮುಧೋಳ 2, ಜಮಖಂಡಿ 21, ಬೇರೆ ಜಿಲ್ಲೆಯ 6 ಪ್ರಕರಣಗಳಿವೆ. ಹೊಸದಾಗಿ ಪತ್ತೆಯಾದ ಕೋವಿಡ್ ಪ್ರಕರಣಗಳಲ್ಲಿ 34 ಕೆಮ್ಮು, ನೆಗಡಿ, ಜ್ವರದ ಲಕ್ಷಣದಿಂದ ಕೂಡಿವೆ.

    ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 471 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 874 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 23331 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 21153 ನೆಗಟಿವ್ ಪ್ರಕರಣ, 1465 ಪಾಜಿಟಿವ್ ಪ್ರಕರಣ ಹಾಗೂ 42 ಜನ ಮೃತ ಪ್ರಕರಣ ವರದಿಯಾಗಿರುತ್ತದೆ.

    ಕೋವಿಡ್-19 ದಿಂದ ಒಟ್ಟು 908 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 515 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 160 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಟೈನ್ಮೆಂಟ್ ರೆನ್ 129 ಇದ್ದು, ಇನ್‌ಸ್ಟಿಟ್ಯೂಶನ್ ಕ್ವಾರಂಟೈನ್‌ನಲ್ಲಿದ್ದ 7343 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts