More

    ಅಗತ್ಯ ವಸ್ತು ಮನೆಗೆ ತಲುಪಿಸಲು ಕ್ರಮ

    ಬಾಗಲಕೋಟೆ: ಕರೊನಾ ಭೀತಿ ಹಿನ್ನೆಲೆ ದೇಶಾದ್ಯಂತ ಲಾಕ್‌ಡೌನ್ ಮಾಡಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಜತೆಗೆ ಮನೆ ಬಾಗಿಲಿಗೆ ತಲುಪಿಸುವಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ಕರೊನಾ ವೈರಸ್ ಹರಡದಂತೆ ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಯಾವುದೇ ರೀತಿಯಲ್ಲಿ ಜನ ಗುಂಪು ಗುಂಪಾಗಿ ಇರದಂತೆ ಮಾಡುವ ನಿಟ್ಟಿನಲ್ಲಿ ಹಾಲು, ಕಿರಾಣಿ ಹಾಗೂ ತರಕಾರಿಗಳನ್ನು ಆಯಾ ಓಣಿಗಳಲ್ಲಿ ಮಾರಾಟ ಮಾಡಲು ಹಾಗೂ ಹೋಮ್ ಡಿಲೆವರಿಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

    ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಕರೊನಾ ಹಿನ್ನೆಲೆ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಹಾಗೂ ಆಶಾ ಕಾರ್ಕರ್ತೆಯರಿಗೆ ವಿಮಾ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು. ಅಂಗನವಾಡಿಯಲ್ಲಿ ಮಕ್ಕಳಿಗೆ ನೀಡುತ್ತಿರುವ ಪೌಷ್ಟಿಕ ಆಹಾರವನ್ನು ನೇರವಾಗಿ ಮನೆಗಳಿಗೆ ನೀಡುವ ಕಾರ್ಯವಾಗಬೇಕು. ಅಗತ್ಯ ತರಕಾರಿ ವಸ್ತುಗಳಿಗೆ ತೊಂದರೆಯಾಗದಂತೆ 400 ತಳ್ಳುವ ಗಾಡಿಗಳಲ್ಲಿ ಓಣಿ ಓಣಿಯಲ್ಲಿ ಮಾರಾಟಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

    ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಅಭಿಯಂತರರು ತಮ್ಮ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಕ್ರಮಕೈಗೊಳ್ಳಬೇಕು. ಪ್ರತಿದಿನ ಾಗಿಂಗ್ ಕಾರ್ಯ ನಡೆಸಬೇಕು. ತಹಸೀಲ್ದಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ಮಾಡಿದ್ದರಿಂದ ಜವಾಬ್ದಾರಿಯಿಂದ ಕರೊನಾ ಸೋಂಕು ಹರಡದಂತೆ ಕ್ರಮಕೈಗೊಳ್ಳಬೇಕು. ಅಲ್ಲದೆ, ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ. ಉಪ ಕಾರ್ಯದರ್ಶಿ ಎ.ಜಿ. ತೋಟದ, ಉಪ ವಿಭಾಗಾಧಿಕಾರಿ ಎಂ. ಗಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎ.ಎನ್. ದೇಸಾಯಿ, ಜಿಲ್ಲಾ ಶಸ ಚಿಕಿತ್ಸಕ ಡಾ. ಪ್ರಕಾಶ ಬಿರಾದಾರ ಸೇರಿ ಇತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಬೀಜ, ಗೊಬ್ಬರ ವಿತರಿಸಿ
    ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಬೀಜ ಮತ್ತು ಗೊಬ್ಬರಗಳ ಕೊರತೆಯಾಗದಂತೆ ಗ್ರಾಮಗಳಲ್ಲಿಯೇ ವಿತರಣೆ ಕ್ರಮಕೈಗೊಳ್ಳಬೇಕು. ಈ ಕುರಿತು ಗೊಬ್ಬರ ಅಂಗಡಿಗಳ ಮಾಲೀಕರ ಸಭೆ ಕರೆದು ರೈತರಿಗೆ ಪೂರೈಸಲು ಹಳ್ಳಿಗಳಿಗೆ ಕಳುಹಿಸಲು ಕ್ರಮಕೈಗೊಳ್ಳಲು ಉಪ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಗ್ರಾಮಗಳಿಗೆ ಹೊರಗಡೆಯಿಂದ ಬಂದವರ ಮಾಹಿತಿಯನ್ನು ಪಡೆಯಬೇಕು ಎಂದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts