More

    ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ

    ಬಾಗಲಕೋಟೆ: ಜಿಲ್ಲೆಯಲ್ಲಿ ಕರೋನಾ ವೈರಸ್ ಪ್ರಕರಣ ಇದುವರೆಗೂ ಪತ್ತಿಯಾಗಿಲ್ಲ. ಸಾಂಕ್ರಾಮಿಕವಾಗಿ ಹರಡದಂತೆ ತಡೆಗಟ್ಟುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ಮಾತನಾಡಿದ ಅವರು, ಪಕ್ಕದ ತೇಲಂಗಾನ ರಾಜ್ಯದಲ್ಲಿ ಕರೋನಾ ವೈರಸ್ ಇರುವ ಪ್ರಕರಣದ ಕಂಡುಬಂದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿಯೂ ಸಹ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. ಅದಕ್ಕೆೆ ಬೇಕಾಗುವ ಎಲ್ಲ ರೀತಿಯ ಕಿಟ್‌ಗಳನ್ನು ಸಂಗ್ರಹ ಮಾಡಿಕೊಳ್ಳುವಂತೆ ತಿಳಿಸಿದರು.

    ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಮಾತನಾಡಿ, ಕರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸಾಕಷ್ಟು ವಿಟಿಎಂ ಟೂಬ್, ಮಾಸ್ಕ ಹಾಗೂ ಪಿಪಿಇ ಕಿಟ್‌ಗಳನ್ನು ಎಲ್ಲ ತಾಲೂಕಾ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಗ್ರಹಿಸಿ ಇಡಲಾಗಿದೆ. ಈ ವರೆಗೆ ಬೇರೆ ದೇಶದಿಂದ ಬಂದಿರುವ 5 ಜನರನ್ನು ಪ್ರತಿದಿನವೂ ಆರೋಗ್ಯ ಮಾಹಿತಿಯನ್ನು ಸಂಗ್ರಹಿಸಿ ನಿಗಾ ಇಡಲಾಗಿದೆ ಎಂದು ಹೇಳಿದರು.

    ಕರೋನಾ ವೈರಸ್ ರೋಗವು ಕೆಮ್ಮುವುದರಿಂದ ಹಾಗೂ ಸೀನುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಇದರಲ್ಲಿ ತೀವ್ರತರವಾದ ಜ್ವರ, ಕೆಮ್ಮು ಹಾಗೂ ಶೀತದ ಲಕ್ಷಣಗಳು ಕಂಡುಬರುತ್ತವೆ. ಜಿಲ್ಲೆಯ ಜನತೆ ಜನಜಂಗುಳಿಯಿಂದ ದೂರವಿರಬೇಕು. ಕರೋನಾ ವೈರಸ್ ಮೊದಲು ಪ್ರಾಣಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗ ಮನುಷ್ಯರಲ್ಲಿ ಹರಡುತ್ತಿದೆ. ಜಿಲ್ಲೆಯ ಜನತೆ ಭಯ ಪಡುವ ಅಗತ್ಯವಿಲ್ಲ. ವೈದ್ಯಕೀಯ ಮಹಾವಿದ್ಯಾಲಯದ ಸಿಬ್ಬಂದಿಗಳ ಸಹಯೋಗದಲ್ಲಿ ತಂಡಗಳನ್ನು ರಚಿಸಿ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಭೆಗೆ ತಿಳಿಸಿದರು.

    ಸಭೆಯಲ್ಲಿ ಉಪವಿಭಾಗಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಶಸ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಸೇರಿದಂತೆ ಇತರೆ ವೈದ್ಯಾಕಾರಿಗಳು ಉಪಸ್ಥಿತರಿದ್ದರು.

    ಮುಂಜಾಗ್ರತಾ ಕ್ರಮ
    ಕೆಮ್ಮುವಾಗ ಮತ್ತು ಸೀನುವಾಗ ಬಾಯಿಗೆ ಕರವಸ ಬಳಸಬೇಕು. ನಿಮ್ಮ ಕೈಯನ್ನು ಚೆನ್ನಾಗಿ ಆಗಾಗ ತೊಳೆದುಕೊಳ್ಳುವ ಮೂಲಕ ಸರಳ ನೈರ್ಮಲ್ಯವನ್ನು ಅಭ್ಯಾಸ ಮಾಡಿಕೊಳ್ಳಬೇಕು. ಕೆಮ್ಮು ನೆಗಡಿ ಇತ್ಯಾದಿ ಅನಾರೋಗ್ಯದ ಲಕ್ಷಣಗಳನ್ನು ಹೊಂದಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಬಾರದು. ಪ್ರಾಣಿಗಳ ನೇರ ಸಂಪರ್ಕವನ್ನು ಹಾಗೂ ಕಚ್ಚಾ ಮಾಂಸ ಸೇವನೆಯಿಂದ ದೂರವಿರಬೇಕು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts