More

    112 ಹೊಸ ಪ್ರಕರಣಗಳು ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 468 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 112 ಜನರಿಗೆ ಕೋವಿಡ್ ಸೋಂಕು ಬುಧವಾರ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 10298 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 9285 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಸೋಂಕು ದೃಢಪಟ್ಟವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರಿಕ್ಷಿಸಲಾಗುತ್ತಿದ್ದ 1598 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 105111 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 92708 ನೆಗಟಿವ್ ಪ್ರಕರಣ, 10298 ಪಾಜಿಟಿವ್ ಪ್ರಕರಣ ಹಾಗೂ 106 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 907 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೇನ್ಮೆಂಟ್ ರೆನ್ 438 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts