More

    26 ಹೊಸ ಪ್ರಕರಣಗಳು ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 46 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ 26 ಕೋವಿಡ್ ಪ್ರಕರಣಗಳು ಬುಧವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 6, ಬಾದಾಮಿ 3, ಬೀಳಗಿ 2, ಜಮಖಂಡಿ 4, ಹುನಗುಂದ 6, ಮುಧೋಳ 5 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13043 ಕೋವಿಡ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 12647 ಜನ ಕೋವಿಡನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ ಲ್ಯಾಬನಲ್ಲಿ ಪರೀಕ್ಷಿಸಲಾಗುತ್ತಿರು 1307 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. 131 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 265 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ತಿಳಿಸಿದ್ದಾರೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts