More

    ಜಿಲ್ಲೆಯಲ್ಲಿ 121 ಹೊಸ ಪ್ರಕರಣ

    ಬಾಗಲಕೋಟೆ: ಜಿಲ್ಲೆಯಲ್ಲಿ 119 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 121 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಚಿಕಿತ್ಸೆ ಫಲಕಾರಿಯಾಗದೇ ಮೂರು ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 5610 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 4712 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 33, ಬಾದಾಮಿ 10, ಹುನಗುಂದ 23, ಬೀಳಗಿ 14, ಮುಧೋಳ 38, ಜಮಖಂಡಿ 2 ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರಿಕ್ಷಿಸಲಾಗುತ್ತಿದ್ದ 894 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 349 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 54096 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 47283 ನೆಗಟಿವ್ ಪ್ರಕರಣ, 5610 ಪಾಜಿಟಿವ್ ಪ್ರಕರಣ ಹಾಗೂ 69 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 829 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 214 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ರೆನ್ 585 ಇದ್ದು, ಇನ್‌ಸ್ಟಿಟ್ಯೂಶನ್ ಕ್ವಾರಂಟೈನ್‌ನಲ್ಲಿದ್ದ 8498 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts