ಬಾಗಲಕೋಟೆ: ಜಿಲ್ಲೆಯಲ್ಲಿ 145 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 97 ಕೋವಿಡ್ ಪ್ರಕರಣಗಳು ಹಾಗೂ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಸೋಂಕಿತ ಭಾನುವಾರ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 10826 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 9777 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 25, ಬಾದಾಮಿ 22, ಹುನಗುಂದ 15, ಬೀಳಗಿ 4, ಮುಧೋಳ 16, ಜಮಖಂಡಿ 15 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರಿಕ್ಷಿಸಲಾಗುತ್ತಿದ್ದ 1197 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 113756 ಸ್ಯಾಂಪಲ್‌ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 101222 ನೆಗಟಿವ್ ಪ್ರಕರಣ, 10826 ಪಾಜಿಟಿವ್ ಪ್ರಕರಣ ಹಾಗೂ 110 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 939 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೇನ್ಮೆಂಟ್ ರೆನ್ 438 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.