More

    ಎಚ್ಚರದಿಂದ ಕಾರ್ಯ ನಿರ್ವಹಿಸಿ

    ಬಾಗಲಕೋಟೆ: ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿರುವ ಸಲೂನ್ ಮತ್ತು ಪಾರ್ಲರ್‌ಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಿಂದ ನೀಡಿದ ಸಲಹೆಗಳನ್ನು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಜ್ವರ, ಶೀತ, ಕೆಮ್ಮು ಮತ್ತು ಗಂಟಲು ನೋವು ಇರುವ ವ್ಯಕ್ತಿಗಳಿಗೆ ಒಳಗೆ ಪ್ರವೇಶ ನೀಡುವಂತಿಲ್ಲ. ಮಾಸ್ಕ್ ಇಲ್ಲದ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು. ಪ್ರವೇಶ ದ್ವಾರದಲ್ಲಿ ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಶಾಪ್‌ಗಳ ಎಲ್ಲ ಸಿಬ್ಬಂದಿಯೂ ಕಡ್ಡಾಯವಾಗಿ ಮಾಸ್ಕ್, ತಲೆಗೆ ಟೋಪಿ ಮತ್ತು ಏಫ್ರಾನ್ ಧರಿಸತಕ್ಕದ್ದು. ಪ್ರತಿಯೊಬ್ಬ ಗ್ರಾಹಕನಿಗೂ ಪ್ರತ್ಯೇಕವಾಗಿ ಬಳಸಿ ಎಸೆಯಬಹುದಾದ ಟವೆಲ್, ಪೇಪರ್ ಶೀಟ್ ಬಳಕೆ ಮಾಡಬೇಕು. ಬಳಕೆ ಮಾಡಿದ ಬಳಿಕ ಎಲ್ಲ ಸಾಧನೆಗಳನ್ನು 30 ನಿಮಿಷ ಶೇ.7ರ ಲೈಸೋಲ್ ಬಳಸಿ ಸೋಂಕು ನಿವಾರಣೆ ಮಾಡಬೇಕು.

    ಹಿನ್ನೆಲೆಯಲ್ಲಿ ಹೆಚ್ಚುವರಿ ಸಾಧನಗಳನ್ನು ಬಳಸಬೇಕು. ಒಂದು ಸೆಟ್ ಸಾಧನಗಳನ್ನು ಬಳಕೆಯಲ್ಲಿದ್ದಾಗ ಇನ್ನೊಂದು ಸೆಟ್‌ನ್ನು ಸೋಂಕು ನಿವಾರಣೆ ಮಾಡಲು ಇಡಬೇಕು. ಪ್ರತಿ ಹೇರ್ ಕಟಿಂಗ್ ಮಾಡಿದ ಬಳಿಕ ಸಿಬ್ಬಂದಿ ತಮ್ಮ ಕೈಗಳನ್ನು ಮೇಲಿಂದ ಮೇಲೆ ಸ್ಯಾನಿಟೈಸ್ ಮಾಡಿಕೊಳ್ಳಬೇಕು. ಟೋಕನ್ ವ್ಯವಸ್ಥೆ ಮೂಲಕ ಹೆಚ್ಚಿನ ಜನ ಸಾಂದ್ರತೆ ಉಂಟಾಗದಂತೆ ನಿಯಂತ್ರಿಸಬೇಕು ಎಂದು ತಿಳಿಸಿದ್ದಾರೆ.

    ಆಸನಗಳ ನಡುವೆ ಕನಿಷ್ಠ 1 ಮೀಟರ್ ಅಂತರವಿರುವಂತೆ ನಿರ್ವಹಣೆ ಮಾಡಬೇಕು. ಪ್ರವೇಶ ದ್ವಾರದಲ್ಲಿ ಕೆಮ್ಮು ಮತ್ತು ಸಾಮಾಜಿಕ ಅಂತರದ ಬಗೆಗಿನ ಶಿಷ್ಟಾಚಾರಗಳಿಗೆ ಸಂಬಂಧಿಸಿದ ಪೋಸ್ಟರ್ ಲಗತ್ತಿಸಬೇಕು. ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್ ಭೇಟಿ ನೀಡಬಹುದಾಗಿದೆ. ಕೋವಿಡ್‌ಗೆ ಸಂಬಂಧಿಸಿದ ರೋಗ ಲಕ್ಷಣಗಳು ಕಂಡುಬಂದರೆ ತಕ್ಷಣ ಕ್ಲಿನಿಕ್‌ಗೆ ಕಳುಹಿಸಬೇಕು ಅಥವಾ ಆಪ್ತಮಿತ್ರ ಸಹಾಯವಾಣಿ 14410 ಸಂಖ್ಯೆಗೆ ಕರೆ ಮಾಡಬೇಕು. ಅವರು ಸಂಪೂರ್ಣ ಗುಣಮುಖರಾಗುವ ತನಕ ಅವರನ್ನು ಮತ್ತೆ ಆವರಣ ಪ್ರವೇಶಕ್ಕೆ ಅವಕಾಶ ನೀಡಬಾರದು. ಈ ಎಲ್ಲ ಸಲಹೆಗಳನ್ನು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts